ಮಂಗಳವಾರ, ಡಿಸೆಂಬರ್ 10, 2019
20 °C

ಚನ್ನಪಟ್ಟಣ ತಾಲ್ಲೂಕು ಶೆಟ್ಟಿಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಬೆಂಗಳೂರಿನ ಕೆಆರ್‌ಪುರಂನ ಮಹಿಳೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ ತಾಲ್ಲೂಕು ಶೆಟ್ಟಿಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಬೆಂಗಳೂರಿನ ಕೆಆರ್‌ಪುರಂನ ಮಹಿಳೆ ಆತ್ಮಹತ್ಯೆ

ರಾಮನಗರ: ಪ್ರೇಮ ವೈಫಲ್ಯದ ಕಾರಣಕ್ಕೆ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಪುರಂ ನಿವಾಸಿ ಕಾಂತಲಕ್ಷ್ಮಿ ಆತ್ಮಹತ್ಯೆಗೆ ಶರಣಾದವರು. ಒಂದು ತಿಂಗಳ ಹಿಂದಷ್ಟೇ ಇವರಿಗೆ ವಿವಾಹವಾಗಿತ್ತು.

ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಪ್ರೀತಿಸಿದ ಯುವಕ ಪ್ರದೀಪ್ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ಹೇಳಿದ್ದಾರೆ.

ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)