ಸಂತೋಷ್ ಹತ್ಯೆ ಪ್ರಕರಣ- ಎನ್ಐಎಗೆ ವಹಿಸಲು ಒತ್ತಾಯ

7

ಸಂತೋಷ್ ಹತ್ಯೆ ಪ್ರಕರಣ- ಎನ್ಐಎಗೆ ವಹಿಸಲು ಒತ್ತಾಯ

Published:
Updated:

ಚಿಕ್ಕಮಗಳೂರು: ಬೆಂಗಳೂರಿನ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಆಗ್ರಹಿಸಿದರು. ನಗರದ ಆಜಾದ್ ಪಾರ್ಕ್‌ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಂತೋಷ್‌ ಕುಟುಂಬಕ್ಕೆ ರಾಜ್ಯ ಸರ್ಕಾರ ₹ 50ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜಿ.ಸೋಮಶೇಖರಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದೌರ್ಜನ್ಯ ಎಸಗುತ್ತಿದೆ. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೂಲಕ ಬಿಜೆಪಿ ಹಣಿಯಲು ಸಂಚು ರೂಪಿಸಿದೆ ಎಂದು ಆರೋಪಿಸಿದರು.

ನಗರಸಭೆ ಸದಸ್ಯ ದೇವರಾಜಶೆಟ್ಟಿ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರ ಮತ ಒಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿದರು. ಮುಖಂಡರಾದ ರಾಜಪ್ಪ, ಜಯರಾಮ್, ಟಿ.ರಾಜಶೇಖರ್, ಸಚಿನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry