‘ಗದಗ ಜಿಲ್ಲೆಯಲ್ಲಿ 137 ಶಿಶು ಮರಣ’

7

‘ಗದಗ ಜಿಲ್ಲೆಯಲ್ಲಿ 137 ಶಿಶು ಮರಣ’

Published:
Updated:

ಗದಗ: ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ‘ತಾಯಿ, ಮಗುವಿನ ಮರಣದ ಪ್ರಮಾಣವನ್ನು ಕಡಿಮೆ ಮಾಡುವುದು ಅಭಿಯಾನದ ಮುಖ್ಯ ಉದ್ದೇಶ’ ಎಂದು ಆರ್.ಸಿ.ಎಚ್. ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಹೇಳಿದರು.

‘ಜಿಲ್ಲೆಯಲ್ಲಿ 2017ರ ಡಿಸೆಂಬರ್‌ನಲ್ಲಿ ಒಟ್ಟು 19 ಶಿಶು, 8 ತಾಯಿ ಮರಣ ಸಂಭವಿಸಿವೆ. ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶದಲ್ಲಿ ತಾಯಿ,ಮಗುವಿನ ಆರೋಗ್ಯ ಕಾಳಜಿ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಮುಂದಾಗಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹೇಳಿದರು.

‘ಜಿಲ್ಲೆಯಲ್ಲಿ 1,166 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಅಪೌಷ್ಟಿಕತೆಯಿಂದ 777 ಮಕ್ಕಳು ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಚ್.ಕಬಾಡಿ, ಸುವರ್ಣ ಆರೋಗ್ಯ ಟ್ರಸ್ಟ್‌ನ ಡಾ.ಡಾಂಗೆ, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಎಸ್.ಜಿ.ಪಲ್ಲೇದ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೇಣುಕಾ ಕೊರವರ, ಡಾ.ಚಂದ್ರಕಲಾ ಜೆ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry