ಭಾನುವಾರ, ಡಿಸೆಂಬರ್ 8, 2019
25 °C

ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್‌ಪಿಎಫ್‌ ಯೋಧರು ಸೇರಿ ನಾಲ್ವರು ಗಾಯ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್‌ಪಿಎಫ್‌ ಯೋಧರು ಸೇರಿ ನಾಲ್ವರು ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶನಿವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ನಾಗರಿಕರು ಹಾಗೂ ಇಬ್ಬರು ಸಿಆರ್‌ಪಿಎಫ್‌ನ ಸಿಬ್ಬಂದಿ ಗಾಯಗೊಂಡಿದ್ದಾರೆ.

ಉಗ್ರರು ಬಾತಗುಂಡ್‌ ಗ್ರಾಮದ ವ್ಯಾಪ್ತಿಯಲ್ಲಿ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ(ಸಿಆರ್‌ಪಿಎಫ್‌) ಕ್ಯಾಂಪ್‌ನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪ್ರತಿಕ್ರಿಯಿಸಿ (+)