ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾರೇಜ್ ನಿರ್ಮಾಣ ಕಾಮಗಾರಿ ತುರ್ತಾಗಿ ಪ್ರಾರಂಭಿಸಿ

ದಾವಣಗೆರೆ ಸ್ಮಾರ್ಟ್‌ಸಿಟಿ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಸೂಚನೆ
Last Updated 25 ಜೂನ್ 2018, 17:41 IST
ಅಕ್ಷರ ಗಾತ್ರ

ದಾವಣಗೆರೆ : ಸ್ಮಾರ್ಟ್‌ಸಿಟಿ ಯೋಜನೆಯಡಿ ದಾವಣಗೆರೆ ನಗರದಲ್ಲಿ ನೀರಿನ ತೊಂದರೆಯನ್ನು ನಿವಾರಿಸಲು ರಾಜನಹಳ್ಳಿ ಹತ್ತಿರ ತುಂಗಭದ್ರಾ ನದಿಗೆ ₹ 97.74 ಕೋಟಿ ವೆಚ್ಚದ ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸೂಚಿಸಿದರು.

ಭಾನುವಾರ ನಡೆದ ಸ್ಮಾರ್ಟ್‌ಸಿಟಿ ಯೋಜನೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸ್ಮಾರ್ಟ್‌ಸಿಟಿ ಯೋಜನೆಯ ಛೇರ್‌ಮನ್ ಎಸ್.ಆರ್.ಉಮಾಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ಕಾಮಗಾರಿಗೆ ಮಂಜೂರಾತಿಯನ್ನು ಕೂಡಾ ನೀಡಲಾಯಿತು.

ಈ ಬ್ಯಾರೇಜ್ ನಿರ್ಮಿಸುವುದರಿಂದ ದಾವಣಗೆರೆ ನಗರಕ್ಕೆ 24 ಗಂಟೆ ನೀರು ಪೂರೈಸುವ ಜಲಸಿರಿ ಯೋಜನೆಯ ಮೂಲವನ್ನು ಸಬಲೀಕರಣ ಮಾಡಲು ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ನೀರಿನ ತೊಂದರೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಸ್ಮಾರ್ಟ್ ಸಿಟಿ ಯೋಜನೆಯ ಎಂ.ಡಿ. ಆಶಾದ್ ಆರ್.ಷರೀಫ್, ಮೇಯರ್‌ ಶೋಭಾ ಪಲ್ಲಾಗಟ್ಟೆ, ಆಯುಕ್ತ ಮಂಜುನಾಥ್ ಬಳ್ಳಾರಿ, ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಶಿವನಳ್ಳಿ ರಮೇಶ್, ಪಿ.ಎನ್. ಚಂದ್ರಶೇಖರ್, ಅಧಿಕ್ಷಕ ಎಂಜಿನಿಯರ್‌ ಎನ್.ಸತೀಶ್, ಸ್ಮಾರ್ಟ್ ಸಿಟಿ ಯೋಜನೆಯ ಸೇವಾನಾಯ್ಕ, ಹೈಡೆಕ್ ಸಂಸ್ಥೆಯ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT