ಶುಕ್ರವಾರ, ಡಿಸೆಂಬರ್ 6, 2019
26 °C

ನಾಗರಹೊಳೆಯಲ್ಲಿ ಬೆಂಕಿ: 10 ಎಕರೆ ಕಾಡು ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗರಹೊಳೆಯಲ್ಲಿ ಬೆಂಕಿ: 10 ಎಕರೆ ಕಾಡು ನಾಶ

ಹುಣಸೂರು/ಪಿರಿಯಾಪಟ್ಟಣ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಆನೆಚೌಕೂರು ಮತ್ತು ಹುಣಸೂರು ವಲಯದಲ್ಲಿ ಶನಿವಾರ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 10 ಎಕರೆ ಕಾಡು ಭಸ್ಮವಾಗಿದೆ.

ಆನೆಚೌಕೂರು ಅರಣ್ಯ ತನಿಖಾ ಠಾಣೆ ಸಮೀಪದ ಹುಣಸೂರು– ಗೋಣಿಕೊಪ್ಪ ರಸ್ತೆ ಬದಿಯಲ್ಲಿ ಬೆಂಕಿ ನಿಯಂತ್ರಣ ರೇಖೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ಬಂದಿದೆ.

‘ಶನಿವಾರ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ನಂದಿಸುವಲ್ಲಿ ಪಿರಿಯಾಪಟ್ಟಣ, ಗೋಣಿಕೊಪ್ಪ ಮತ್ತು ಹುಣಸೂರು ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಶ್ರಮಿಸಿದರು. ಇದರಿಂದಾಗಿ ಮಧ್ಯಾಹ್ನ 3 ಗಂಟೆ ವೇಳೆಗೆ ನಿಯಂತ್ರಿಸಲು ಸಾಧ್ಯವಾಯಿತು’ ಎಂದು ಹುಲಿ ಯೋಜನೆ ನಿರ್ದೇಶಕ ಮಣಿಕಂಠನ್‌ ಹೇಳಿದರು.

‘ಘಟನೆಯಲ್ಲಿ ಯಾವುದೇ ಪ್ರಾಣಿ ಮೃತಪಟ್ಟಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಕಿ ನಿಯಂತ್ರಣ ರೇಖೆ ನಿರ್ಮಿಸಲಾಗಿದೆ. ದಾರಿಹೋಕರಿಂದ ಯಾವುದೇ ಅಪಾಯ ಎದುರಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಬಾರಿ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆಂಕಿ ನಂದಿಸುವ ಕುರಿತು ವಿಶೇಷ ತರಬೇತಿ

ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸಾರ್ವಜನಿಕರು ಬೆಂಕಿ ಹಾಕುವ ಕುತಂತ್ರ ಮಾಡದೆ ಪರಿಸರ ರಕ್ಷಣೆಗೆ ಕೈ ಜೋಡಿಸಬೇಕು. ಅರಣ್ಯಕ್ಕೆ ಬೆಂಕಿ ಬಿದ್ದರೆ ಹತೋಟಿಗೆ ತರುವುದು ತೀವ್ರ ಕಷ್ಟ ಸಾಧ್ಯ’ ಎಂದು ಅವರು ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)