9,730 ಕಲ್ಲುತೂರಾಟಗಾರರ ಪ್ರಕರಣಗಳು ವಾಪಸ್‌

7

9,730 ಕಲ್ಲುತೂರಾಟಗಾರರ ಪ್ರಕರಣಗಳು ವಾಪಸ್‌

Published:
Updated:

ಜಮ್ಮು : ಕಲ್ಲು ತೂರಾಟದಂತಹ ದುಷ್ಕೃತ್ಯಗಳಲ್ಲಿ ತೊಡಗಿದ್ದ 9,730 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಒಪ್ಪಿಗೆ ಸೂಚಿಸಿದೆ.  ‘2008ರಿಂದ 2017ರ ಅವಧಿಯಲ್ಲಿ ದಾಖಲಾದ ಪ್ರಕರಣಗಳು ಸೇರಿದಂತೆ ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ 1,745 ಪ್ರಕರಣಗಳನ್ನು ಷರತ್ತುಬದ್ಧವಾಗಿ ಹಿಂದಕ್ಕೆ ಪಡೆಯಲಾಗುತ್ತದೆ’ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ‘ಕಳೆದ ಎರಡು ವರ್ಷಗಳಲ್ಲಿ ಕಲ್ಲುತೂರಾಟ ಸೇರಿದಂತೆ ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾದ 4 ಸಾವಿರ ಮಂದಿಗೆ ಕ್ಷಮಾದಾನ ನೀಡಲು ನಿರ್ಧರಿಸಲಾಗಿದೆ. ಕುಟುಂಬಸ್ಥರ ಭದ್ರತೆಯ ಹಿತದೃಷ್ಟಿಯಿಂದ ಮೊದಲ ಬಾರಿ ತಪ್ಪು ಮಾಡಿದವರ ಮಾಹಿತಿ ನೀಡಲು ಸಾಧ್ಯವಿಲ್ಲ’ ಎಂದರು.

‘2016 ಹಾಗೂ 2017ರಲ್ಲಿ 3,773 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 11,290 ಮಂದಿಯ್ನು ಬಂಧಿಸಲಾಗಿದೆ. 233 ಮಂದಿ ಇದುವರೆಗೂ ಪತ್ತೆಯಾಗಿಲ್ಲ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry