‘ಟಿಕೆಟ್‌ ಸಿಕ್ಕರೆ ಚಿತ್ರದುರ್ಗದಿಂದ ಸ್ಪರ್ಧೆ’

7
ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯದರ್ಶಿ ಭಾವನಾ ಹೇಳಿಕೆ

‘ಟಿಕೆಟ್‌ ಸಿಕ್ಕರೆ ಚಿತ್ರದುರ್ಗದಿಂದ ಸ್ಪರ್ಧೆ’

Published:
Updated:

ಮಂಗಳೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕಳಾಗಿದ್ದೇನೆ’ ಎಂದು ಚಿತ್ರನಟಿ, ಕೆಪಿಸಿಸಿ ಕಾರ್ಯದರ್ಶಿ ಭಾವನಾ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನಾನು ಮೂಲತಃ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವಳು. ನನ್ನ ಅಜ್ಜ ಬಾರ್ಕೂರಿನವರು. ನನ್ನ ತಂದೆಯ ಊರಾದ ಚಿತ್ರದುರ್ಗದಲ್ಲಿ ನೆಲೆಸಿದ್ದೇನೆ. ಹೀಗಾಗಿ ಅಲ್ಲಿಂದಲೇ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ’ ಎಂದರು.

ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಚಿತ್ರದುರ್ಗದಿಂದ ಸ್ಪರ್ಧಿಸಲು ಟಿಕೆಟ್‌ ಕೊಡುವ ಭರವಸೆ ನೀಡಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry