ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣ: ಕರ್ನಾಟಕ ಹಿಂದೆ

Last Updated 3 ಫೆಬ್ರುವರಿ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತ್ಯಂಕ ಕಡಿಮೆ ಇದೆ ಎಂಬ ಸಂಗತಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ವರದಿ ಬಹಿರಂಗಪಡಿಸಿದೆ.

‘ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ ವರದಿ 2016–17’ ಪರಾಮರ್ಶೆ ನಡೆಸಿದ ರಾಜ್ಯ ಸರ್ಕಾರ ದಾಖಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಕ್ರಮ ಕುರಿತು ಚರ್ಚಿಸಿದೆ.

18ರಿಂದ23 ವಯೋಮಾನದ ರಾಜ್ಯದ ಜನಸಂಖ್ಯೆಯಲ್ಲಿ ಶೇ 26.5ರಷ್ಟು ಜನರು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ.

ಇಡೀ ದೇಶದ ಸರಾಸರಿ ಅನುಪಾತಕ್ಕೆ ಹೋಲಿಸಿದರೆ ಕರ್ನಾಟಕದ ಪ್ರಮಾಣ ಶೇ 1ರಷ್ಟು ಹೆಚ್ಚಿದೆ.

ನೆರೆಯ ತಮಿಳುನಾಡು, ಮಹಾರಾಷ್ಟ್ರ, ಆಂಧ್ರ, ಕೇರಳ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸಾಧನೆ ಕಳಪೆ ಎಂಬುದನ್ನು ಅಂಕಿ ಅಂಶಗಳು ಹೇಳುತ್ತಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಪರಿಸ್ಥಿತಿಯೂ ಭಿನ್ನವಾಗಿಲ್ಲ ಎಂದು ಮೂಲಗಳು ವಿವರಿಸಿವೆ.

ಎರಡು ಸುತ್ತಿನ ಸಭೆ: ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಈ ವರದಿ ಮುಂದಿಟ್ಟುಕೊಂಡು ಪ್ರಾಥಮಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಉನ್ನತ ಶಿಕ್ಷಣ,
ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಎರಡು ಸುತ್ತಿನ ಸಭೆ ನಡೆಸಿದ್ದಾರೆ.

‘ಪದವಿ ಪೂರ್ವ ಹಂತದಲ್ಲಿ ಫಲಿತಾಂಶ ಹೆಚ್ಚಳಕ್ಕೆ ಮೂರು ಪ್ರಮುಖ ಕ್ರಮಗಳನ್ನು ಈ ವರ್ಷ ಕೈಗೊಳ್ಳಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವ್ಯಾಕರಣ ಕಲಿಕೆಗೆ ವಿಶೇಷ ತರಬೇತಿ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ದಸರಾ ರಜೆಯಲ್ಲಿ ವಿಶೇಷ ತರಗತಿ ನಡೆಸಲಾಗಿದೆ.  ಉಪನ್ಯಾಸಕರಿಗೂ ತರಬೇತಿ ಕಾರ್ಯಾಗಾರ ನಡೆಸಲಾಗಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ‘‍‍ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT