ಮಹದಾಯಿ: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ರೈತ ಹೋರಾಟಗಾರರಿಂದ ಕರಾಳ ದಿನ

7

ಮಹದಾಯಿ: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ರೈತ ಹೋರಾಟಗಾರರಿಂದ ಕರಾಳ ದಿನ

Published:
Updated:
ಮಹದಾಯಿ: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ರೈತ ಹೋರಾಟಗಾರರಿಂದ ಕರಾಳ ದಿನ

ಬೆಂಗಳೂರು: ಮಹದಾಯಿ ಯೋಜನೆ ಜಾರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕದ ರೈತ ಹೋರಾಟಗಾರರು ಕರಾಳ ದಿನ ಆಚರಿಸುತ್ತಿದ್ದು, ಇಲ್ಲಿನ ಸ್ವಾತಂತ್ರ್ಯ ಉದ್ಯಾನದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಸವರಾಜ ದೇವರು ಸ್ವಾಮೀಜಿ ಹಾಗೂ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ರೈತರ ಬಂಧನ (ರಾಮನಗರ ವರದಿ): ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸಲು ಮಧ್ಯಾಹ್ನ ಬೆಂಗಳೂರಿಗೆ ಬರಲಿರುವ ಪ್ರಧಾನಿ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಸಲುವಾಗಿ ಇಲ್ಲಿನ ಐಜೂರು ವೃತ್ತದಿಂದ ತೆರಳುತ್ತಿದ್ದ ರೈತರನ್ನು  ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದರು.

ಬಂಧಿತರನ್ನು ಸದ್ಯ ಐಜೂರು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry