ಭಾನುವಾರ, ಡಿಸೆಂಬರ್ 8, 2019
25 °C

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ

Published:
Updated:
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ: ಬೌಲಿಂಗ್‌ ಆಯ್ಕೆ

ಸೆಂಚುರಿಯನ್, ದಕ್ಷಿಣ ಆಫ್ರಿಕಾ: ಟೆಸ್ಟ್ ಸರಣಿಯಲ್ಲಿ ನಿರಾಸೆ ಕಂಡರೂ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭರವಸೆಯಿಂದ ಕಣಕ್ಕೆ ಇಳಿದಿದೆ.

ಭಾನುವಾರ ಇಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ದಕ್ಷಿಣ ಆಫ್ರಿಕಾ 3 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 4 ರನ್‌ ಗಳಿಸಿದೆ. 

ಭಾರತಕ್ಕೆ ನೆಚ್ಚಿನ ತಾಣ: ಏಕದಿನ ಕ್ರಿಕೆಟ್‌ನಲ್ಲಿ ಭಾರತದ ನೆಚ್ಚಿನ ತಾಣ ಸೆಂಚುರಿಯನ್. ಇಲ್ಲಿ ಭಾರತ ಒಟ್ಟು 11 ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿ ಗೆದ್ದಿದೆ. 2003ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಇಲ್ಲಿ ಗೆದ್ದಿತ್ತು. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಇಲ್ಲಿ ಐದು ಪಂದ್ಯಗಳನ್ನು ಆಡಿದ್ದು ತಲಾ ಎರಡು ಗೆಲುವು ಮತ್ತು ಸೋಲು ಕಂಡಿದೆ.

ಶತಕದೊಂದಿಗೆ ಮಿಂಚಿದ ನಾಯಕ ವಿರಾಟ್ ಕೊಹ್ಲಿ ಮತ್ತು ಉತ್ತಮ ಬ್ಯಾಟಿಂಗ್ ಮಾಡಿದ ಅಜಿಂಕ್ಯ ರಹಾನೆ ತಂಡದ ಬ್ಯಾಟಿಂಗ್‌ ಬಲಕ್ಕೆ ವಿಶ್ವಾಸ ತುಂಬಿದ್ದಾರೆ. ಕಳೆದ ಪಂದ್ಯದಲ್ಲಿ ಬೌಲರ್‌ಗಳು ಕೂಡ ತಂಡದ ಕೈ ಹಿಡಿದಿದ್ದರು. ಹೀಗಾಗಿ ಮತ್ತೊಂದು ಜಯಕ್ಕೆ ತಂಡದ ಕಾತರಗೊಂಡಿದೆ.

ಡರ್ಬನ್‌ನ ಕಿಂಗ್ಸ್‌ಮೇಡ್‌ ಅಂಗಳದಲ್ಲಿ ಫೆ.1ರಂದು ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 6 ವಿಕೆಟ್‌ ಜಯ ಸಾಧಿಸಿತ್ತು.

ಪ್ರತಿಕ್ರಿಯಿಸಿ (+)