ಸೋಮವಾರ, ಡಿಸೆಂಬರ್ 9, 2019
22 °C

ಕರ್ನಾಟಕ ನಂ–1: ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಯಡಿಯೂರಪ್ಪ

Published:
Updated:
ಕರ್ನಾಟಕ ನಂ–1: ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಭಾನುವಾರ) ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್‌ನಲ್ಲಿ ಪ್ರಧಾನಿಗೆ ಮೋದಿ ಅವರಿಗೆ ಕರ್ನಾಟಕ ನಂ–1 ರಾಜ್ಯಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದರು. ಇದಕ್ಕೆ ಬಿ.ಎಸ್‌. ಯಡಿಯೂರಪ್ಪ ಟ್ವಿಟರ್‌ನಲ್ಲಿ ತಿರುಗೇಟು ನೀಡಿದ್ದಾರೆ.

‘ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳನ್ನು ಒಳಗೊಂಡಂತೆ ಪ್ರಮುಖ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಉತ್ತಮ ಸಾಧನೆ ಮಾಡಿ ಆಗ್ರಸ್ಥಾನದಲ್ಲಿದೆ(ನಂಬರ್ 1) ಕರ್ನಾಟಕದ ಯಶಸ್ಸು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದೆ’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್​. ಯಡಿಯೂರಪ್ಪನವರು, ‘ಪ್ರಧಾನಿ ಮೋದಿ ಅವರಿಗೆ ಸ್ವಾಗತ ಕೋರಿದ್ದಕ್ಕೆ ಧನ್ಯವಾದಗಳು ಸಿಎಂ ಸಿದ್ದರಾಮಯ್ಯನವರೇ ಹೌದು, ಕರ್ನಾಟಕ ಮೊದಲ ಸ್ಥಾನದಲ್ಲಿದೆ ಯಾವುದರಲ್ಲಿ ಎಂದರೆ ಭ್ರಷ್ಟಾಚಾರದಲ್ಲಿ. ರಾಜ್ಯದಲ್ಲಿ 3500 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಧಿಕಾರಿಗಳು ನಿಗೂಢವಾಗಿ ಮೃತಪಡುತ್ತಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗುತ್ತಿದೆ. ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ...
ಪ್ರಧಾನಿ ಮೋದಿಗೆ ಟ್ವಿಟರ್‌ನಲ್ಲಿ ಸ್ವಾಗತ ಕೋರಿದ ಸಿದ್ದರಾಮಯ್ಯ

ಪ್ರತಿಕ್ರಿಯಿಸಿ (+)