ಮಂಗಳವಾರ, ಡಿಸೆಂಬರ್ 10, 2019
20 °C

ಚಾಹಲ್‌ಗೆ ಐದು ವಿಕೆಟ್‌: 118 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್‌

Published:
Updated:
ಚಾಹಲ್‌ಗೆ ಐದು ವಿಕೆಟ್‌: 118 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್‌

ಸೆಂಚೂರಿಯನ್ (ದಕ್ಷಿಣ ಆಫ್ರಿಕಾ): ಇಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಚಮತ್ಕಾರಿಕ ಬೌಲಿಂಗ್‌ ದಾಳಿ ನಡೆಸಿದ ಭಾರತ ಎದುರಾಳಿ ತಂಡವನ್ನು 118 ರನ್‌ಗಳಿಗೆ ಕಟ್ಟಿಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು(32.2 ಓವರ್‌ಗಳಲ್ಲಿ 118 ರನ್‌ ಗಳಿಸಿ ಆಲೌಟ್‌ ಆಗಿದೆ).

ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ 5, ಕುಲದೀಪ್‌ ಯಾದವ್‌ 3 ವಿಕೆಟ್‌ ಪಡೆದು ಮಿಂಚಿದರು.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಭಾರತ 2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 9 ರನ್‌ ಗಳಿಸಿದೆ.

ಪ್ರತಿಕ್ರಿಯಿಸಿ (+)