6

ವೈಯಕ್ತಿಕ ದ್ವೇಷಕ್ಕಾಗಿ ಯುವಕರಿಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ತರಬೇತಿನಿರತ ಸಬ್ ಇನ್ಸ್‌ಪೆಕ್ಟರ್

Published:
Updated:
ವೈಯಕ್ತಿಕ ದ್ವೇಷಕ್ಕಾಗಿ ಯುವಕರಿಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ತರಬೇತಿನಿರತ ಸಬ್ ಇನ್ಸ್‌ಪೆಕ್ಟರ್

ನವದೆಹಲಿ: ತರಬೇತಿನಿರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಇಬ್ಬರು ಯುವಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನೊಯಿಡಾದಲ್ಲಿ ಶನಿವಾರ ರಾತ್ರಿ ನಡೆದಿದೆ.

ಜಿತೇಂದ್ರ ಯಾದವ್ ಮತ್ತು ಅವರ ಸ್ನೇಹಿತ ಸುನಿಲ್ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಿನಾ ಕಾರಣ ಪೊಲೀಸರು ನಕಲಿ ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ಅಮಾನತು: ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಎಸ್‌ಎಸ್‌ಪಿ ಲವ ಕುಮಾರ್‌ ತಿಳಿಸಿದ್ದಾರೆ.

ವೈಯಕ್ತಿಕ ದ್ವೇಷದಿಂದ ಈ ಹತ್ಯೆ ನಡೆದಿರುವುದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ ಎಂದು ಲವ ಕುಮಾರ್ ಹೇಳಿದ್ದನ್ನು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಮೊದಲು ಸಬ್ ಇನ್ಸ್‌ಪೆಕ್ಟರ್ ಮತ್ತು ಯುವಕರ ನಡುವೆ ಮಾತಿನಚಕಮಕಿ ನಡೆದಿದೆ. ನಂತರ ಯುವಕರ ಮೇಲೆ ಗುಂಡಿಕ್ಕಲಾಗಿದೆ ಎಂದೂ ಲವ ಕುಮಾರ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry