ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ

7

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ

Published:
Updated:
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ

ಬೆಂಗಳೂರು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಕಹಳೆ ಊದಿದರು.

ಅರಮನೆ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ 75 ದಿನಗಳ ಕಾಲ ನಡೆದ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಬದಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ. ಕಾಂಗ್ರೆಸ್ ಸಂಸ್ಕೃತಿ ಅಂತ್ಯಗೊಳಿಸಿ, ಸಮಾಜ, ರಾಜನೀತಿಯಲ್ಲಿ ಕಾಂಗ್ರೆಸ್ ಮುಕ್ತಗೊಳಿಸುವ ಜರೂರತ್ತು ಇದೆ ಎಂದರು.

ಸರ್ವರ ಸಹಕಾರ ಸರ್ವರ ವಿಕಾಸ ನಮ್ಮ ನಡೆ. ಕಾರ್ನಾಟಕ ರಾಜ್ಯದ ಪ್ರಗತಿ ಆಗಬೇಕಿದೆ. ಜನಧನ್‌, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಸ್ವಚ್ಛ ಭಾರತ ಯೋಜನೆ ಅಡಿ ಶೌಚಾಲಯ ನಿರ್ಮಾಣ, ಮಿಷನ್‌ ಇಂಧ್ರ ಧನುಷ್‌ ಯೋಜನೆಗಳಲ್ಲಿ ರಾಜ್ಯದ ಜನರಿಗೆ ಕೇಂದ್ರ ಸರ್ಕಾರ ಅಪಾರ ಕೊಡುಗೆ ನೀಡಿದೆ ಎಂದು ಮೋದಿ ಜನರ ಮುಂದೆ ಅಂಕಿ ಸಂಖ್ಯೆಗಳ ಲೆಕ್ಕವನ್ನು ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry