ಬುಧವಾರ, ಡಿಸೆಂಬರ್ 11, 2019
22 °C

ಪಿ.ಯು ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿ.ಯು ಪರೀಕ್ಷಾ ಕೇಂದ್ರಗಳಲ್ಲಿ  ಸಿ.ಸಿ.ಟಿ.ವಿ

ಬೆಂಗಳೂರು: ದ್ವಿತೀಯ ಪಿ.ಯು ಪರೀಕ್ಷೆಗಳು ನಡೆಯುವ ಎಲ್ಲ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಇರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.

ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇಲ್ಲಿ ಭಾನುವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದರು.

‘2017ರಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಸರ್ಕಾರಿ ಕಾಲೇಜುಗಳ ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಎಲ್ಲೂ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)