ಮಂಗಳವಾರ, ಡಿಸೆಂಬರ್ 10, 2019
26 °C

ಕೆಟ್ಟು ನಿಂತ ಆಟೊದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಟ್ಟು ನಿಂತ ಆಟೊದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ!

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ಕೆಟ್ಟು, ದಾರಿ ಮಧ್ಯೆ ನಿಂತಿದ್ದ ಆಟೊದಲ್ಲೇ ಮಹಿಳೆಯೊಬ್ಬರು ಗಂಡು ಮಗುವಿಗೆ ಭಾನುವಾರ ಬೆಳಿಗ್ಗೆ ತಾಲ್ಲೂಕಿನ ಕೋನಸಾಗರ ಸಮೀಪದ ಕಕ್ಕರಾಯಣ್ಣ ಕಪಿಲೆ ಬಳಿ ಜನ್ಮ ನೀಡಿದ್ದಾರೆ.

ಕೋನಸಾಗರದಿಂದ ಗೌರಮ್ಮ ಎಂಬ ಮಹಿಳೆಯನ್ನು ಕೊಂಡ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಬರುವಾಗ ಆಟೊ ಕೆಟ್ಟುಹೋಗಿದೆ. ಬೇರೆ ವ್ಯವಸ್ಥೆ ಮಾಡಿ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆಟೊದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವೈದ್ಯಾಧಿಕಾರಿ ಡಾ. ಶಿವಕುಮಾರ್‌ ತಿಳಿಸಿದ್ದಾರೆ.

ಪ್ರಸ್ತುತ ತಾಯಿ, ಮಗು ಕೊಂಡ್ಲಹಳ್ಳಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಿಂದ ಇದ್ದಾರೆ.

ಪ್ರತಿಕ್ರಿಯಿಸಿ (+)