ನವದೆಹಲಿ: ಬೊಫೋರ್ಸ್ ಫಿರಂಗಿ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ಸಿಎಜಿ ವರದಿ ಪರಿಶೀಲಿಸುತ್ತಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ (ಪಿಎಸಿ) ಉಪ ಸಮಿತಿಯು 27 ವರ್ಷಗಳ ನಂತರ ತನ್ನ ವರದಿ ಅಂತಿಮಗೊಳಿಸುವ ಸಾಧ್ಯತೆ ಇದೆ.

1989 ಮತ್ತು 1990ರಲ್ಲಿ ನಡೆದಿದ್ದ ಬೊಫೋರ್ಸ್ ಹೌವಿಟ್ಜರ್ ಫಿರಂಗಿ ಖರೀದಿ ಒಪ್ಪಂದದಲ್ಲಿ ನಿಯಮಗಳಿಗೆ ಅನುಸಾರವಾಗಿ ನಡೆದುಕೊಂಡಿಲ್ಲ ಎಂಬ ಮಹಾಲೇಖಪಾಲರ ವರದಿಯಲ್ಲಿರುವ ಅಂಶಗಳ ಬಗ್ಗೆ ರಕ್ಷಣೆಗೆ ಸಂಬಂಧಿಸಿದ ಆರು ಸದಸ್ಯರ ಉಪ ಸಮಿತಿಯು ಪರಿಶೀಲನೆ ನಡೆಸುತ್ತಿದೆ.

ಸಂಬಂಧಿಸಿದ ಸಚಿವಾಲಯ ಮತ್ತು ಸರ್ಕಾರಿ ಸಂಸ್ಥೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಿತಿಗೆ ಲಿಖಿತ ವಿವರಣೆ ನೀಡದೇ ಇರುವುದರಿಂದ ವರದಿ ಸಿದ್ಧಪಡಿಸುವುದು ತಡವಾಗಿದೆ ಎಂದು ಬಿಜೆಡಿಯ ಭರ್ತೃಹರಿ ಮಹ್ತಾಬ್ ನೇತೃತ್ವದ ಉಪ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ತನ್ನ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಉಪ ಸಮಿತಿಯು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.

ಬಜೆಟ್ ಅಧಿವೇಶನದಲ್ಲಿ ಅಂತಿಮ: ‘ಕರಡು ವರದಿ ಸಿದ್ಧಪಡಿಸುವಿಕೆ ಕಾರ್ಯ ಆರಂಭವಾಗಿದ್ದು, ಬಜೆಟ್ ಅಧಿವೇಶನದಲ್ಲಿ ಅದನ್ನು ಅಂತಿಮಗೊಳಿಸಲಾಗುವುದು’ ಎಂದು ಮತ್ತೊಬ್ಬ ಸದಸ್ಯ ಹೇಳಿದ್ದಾರೆ.

ವರದಿಯು ಸಮಗ್ರವಾಗಿರಲಿದ್ದು, ಒಪ್ಪಂದಕ್ಕೆ ಸಂಬಂಧಿಸಿದ ಎಲ್ಲ ತಪ್ಪುಗ್ರಹಿಕೆಗಳನ್ನು ನಿವಾರಿಸಲಿದೆ ಎಂದು ಅವರು ಹೇಳಿದ್ದಾರೆ.

ಬೊಫೋರ್ಸ್ ಹಗರಣ ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. 1989ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರ ಪತನಗೊಳ್ಳಲು ಇದು ಪ್ರಮುಖ ಕಾರಣ ಎಂದು ನಂಬಲಾಗಿದೆ.

ಈ ಹಗರಣದ ಆರೋಪಿಗಳ ವಿರುದ್ಧದ ಎಲ್ಲ ಆರೋಪಗಳನ್ನು ವಜಾ ಮಾಡಿ 2005ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.