ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ ಪ್ರವೇಶಕ್ಕೆ ಮೆಟ್ಟಿಲಾದ ಉಪಚುನಾವಣೆ

Last Updated 5 ಫೆಬ್ರುವರಿ 2018, 6:44 IST
ಅಕ್ಷರ ಗಾತ್ರ

ಮೈಸೂರು: ಜೆಡಿಎಸ್‌ ಮುಖಂಡ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮೊದಲ ಬಾರಿ ವಿಧಾನಸಭೆ ಪ್ರವೇಶಕ್ಕೆ ಕಾರಣವಾಗಿದ್ದು ಉಪಚುನಾವಣೆ. 1998ರ ಲೋಕಸಭಾ ಚುನಾವಣೆ ಯಲ್ಲಿ ಸಿ.ಎಚ್‌.ವಿಜಯಶಂಕರ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೈಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಅವರಿಂದ ತೆರವಾದ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಅದೇ ವರ್ಷ ನಡೆದ ಉಪಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಜನತಾದಳ ಅಭ್ಯರ್ಥಿಯಾಗಿ ಗೆಲುವು ಒಲಿಸಿಕೊಂಡರು.

‘ಎರಡು ಬಾರಿ ಲೋಕಸಭೆಯಲ್ಲಿ ಸೋಲು ಕಂಡ ನನಗೆ ಸಹಜವಾಗಿಯೇ ನಿರಾಸೆಯಾಗಿತ್ತು. ಆಗ ಉ‍‍ಪಚುನಾವಣೆ ಯಲ್ಲಿ ಸ್ಪರ್ಧಿಸುವಂತೆ ಎಚ್‌.ಡಿ.ದೇವೇ ಗೌಡ ಹಾಗೂ ಸಿದ್ದರಾಮಯ್ಯ ನನ್ನ ಮನವೊಲಿಸಿದರು. ಅಷ್ಟೇ ಅಲ್ಲ; ನನ್ನ ಗೆಲುವಿಗೆ ಶ್ರಮಿಸಿದರು. ಇವರಿಬ್ಬರ ಸಹಾಯದಿಂದ ಮೊದಲ ಬಾರಿ ಶಾಸಕನಾದೆ’ ಎಂದು ಜಿ.ಟಿ.ದೇವೇಗೌಡ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿ.ಪಾಪಣ್ಣ ಅವರನ್ನು ಮಣಿಸಿದ್ದು ವಿಶೇಷ.

ಇದಕ್ಕೂ ಮೊದಲು ಲೋಕಸಭಾ ಚುನಾವಣೆಗಳಲ್ಲಿ ಮೈಸೂರು ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿ ಸಿದ್ದ ಜಿಟಿಡಿ, ಎರಡು ಬಾರಿ ಸೋಲು ಅನುಭವಿಸಿದ್ದರು. 1996ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಎದುರು ಹಾಗೂ 1998ರಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಎದುರು ಪರಾಭವಗೊಂಡಿದ್ದರು.

‘ಕೃಷಿ, ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಹಿತೈಷಿಗಳು ರಾಜಕೀಯ ಪ್ರವೇಶಿಸುವಂತೆ ಒತ್ತಾಯಿಸು ತ್ತಿದ್ದರು. ಆದರೆ, ಲೋಕ ಸಭೆ, ವಿಧಾನಸಭಾ ಚುನಾವಣೆ ಯಲ್ಲಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೆ ಅಷ್ಟೆ. 1978ರಲ್ಲಿ ತಾಲ್ಲೂಕು ಬೋರ್ಡ್‌ ಚುನಾವಣೆಗೆ ಸ್ಪರ್ಧಿಸುವಂತೆ ಬಂದ ಆಹ್ವಾನ ತಿರಸ್ಕ ರಿಸಿ ಸತ್ಯನಾರಾಯಣ ಅವರನ್ನು ಬೆಂಬ ಲಿಸಿದ್ದೆ. 1983ರಲ್ಲಿ ಹೆಚ್ಚಿನವರು ಕಾಂಗ್ರೆಸ್‌ ಸೇರಿದರು. ಆಗ ಸಿದ್ದರಾಮಯ್ಯ ಅವರನ್ನು ಸ್ವತಂತ್ರ್ಯ ಅಭ್ಯರ್ಥಿಯನ್ನಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಸಿ ಗೆಲ್ಲಿಸಿದೆವು. ಎಪಿಎಂಸಿ ಚುನಾವಣೆಗೆ ಸ್ಪರ್ಧಿಸುವಂತೆ ಕೆಂಪೀರೇಗೌಡರು ನನ್ನನ್ನು ಒತ್ತಾಯಿಸಿದರು. ಅನಿವಾರ್ಯ ವಾಗಿ ಸ್ಪರ್ಧಿಸಿ ಗೆದ್ದೆ. ಸಹಕಾರ ಕ್ಷೇತ್ರದ ಚುನಾವಣೆಗಳಲ್ಲಿ ಸ್ಪರ್ಧಿಸಿದೆ. ಈ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶಿಸಿದೆ‌’ ಎಂದು ಅವರು ನೆನಪುಗಳನ್ನು ಮೆಲುಕು ಹಾಕಿದರು.

‘ಜಿಲ್ಲಾ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿ ಇಲವಾಲ ಕ್ಷೇತ್ರದಿಂದ ಎರಡು ಬಾರಿ ಗೆದ್ದೆ. 1995ರಲ್ಲಿ ಅವಿಭಜಿತ ಮೈಸೂರು ಜಿಲ್ಲಾ ಪರಿಷತ್‌ನ ಅಧ್ಯಕ್ಷ ನಾಗಿಯೂ ಕಾರ್ಯನಿರ್ವಹಿಸಿದೆ. ಇದು ನನ್ನ ರಾಜಕೀಯ ಜೀವನದ ಮಹತ್ವದ ತಿರುವು. ಜಿಲ್ಲಾ ಪರಿಷತ್‌ ಅಧ್ಯಕ್ಷ ಸ್ಥಾನ ಎಂಬುದು ಆಗ ಶಾಸಕ ಸ್ಥಾನಕ್ಕಿಂತಲೂ ಹೆಚ್ಚು ಮಹತ್ವ ಹೊಂದಿತ್ತು’ ಎಂದು ಹೇಳಿದರು.

1999ರಲ್ಲಿ ಹುಣಸೂರು ಕ್ಷೇತ್ರದಲ್ಲಿ ಸೋಲು ಕಂಡಿದ್ದ ಜಿಟಿಡಿ 2004ರಲ್ಲಿ ಗೆಲುವು ಸಾಧಿಸಿದರು. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಹಕಾರ ಸಚಿವರಾಗಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿದ್ದಾರೆ.

ಜಿಟಿಡಿ ರಾಜಕೀಯ ಹೆಜ್ಜೆಗಳು

41996: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜನತಾದಳದಿಂದ ಸ್ಪರ್ಧೆ– ಸೋಲು

41998:ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜನತಾದಳದಿಂದ ಸ್ಪರ್ಧೆ– ಸೋಲು

41998: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧೆ–ಗೆಲುವು

41999: ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳದಿಂದ ಸ್ಪರ್ಧೆ–ಸೋಲು

42004: ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ–ಗೆಲುವು

42008: ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ–ಸೋಲು

42013: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ–ಗೆಲುವು

* * 

1998ರ ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಇರಲಿಲ್ಲ. ಆಗ ದೇವೇಗೌಡರು, ಸಿದ್ದರಾಮಯ್ಯ ನನಗೆ ಅವಕಾಶ ನೀಡಿ ಗೆಲ್ಲಿಸಿದರು
ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT