ಶುಕ್ರವಾರ, ಡಿಸೆಂಬರ್ 13, 2019
27 °C

ಮೋದಿ ಬೆಳವಣಿಗೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಕಾಗೋಡು ತಿಮ್ಮಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೋದಿ ಬೆಳವಣಿಗೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಕಾಗೋಡು ತಿಮ್ಮಪ್ಪ

ಸಾಗರ: ಪ್ರಧಾನಿ ನರೇಂದ್ರ ಮೋದಿ ಇನ್ನೂ ಜಾಸ್ತಿ ಬೆಳೆದರೆ ಭವಿಷ್ಯದಲ್ಲಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬರಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು. ಭಾನುವಾರ ಇಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಬೂತ್ ಮತ್ತು ವಾರ್ಡ್‌ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.

‘ಭಾರತವನ್ನು ಹಿಂದೂಗಳ ದೇಶವೆಂದು ಬಿಂಬಿಸುವ ಪ್ರಯತ್ನವನ್ನು ಕೋಮುವಾದಿ ಶಕ್ತಿಗಳು ಮಾಡುತ್ತಿವೆ. ಅನೇಕ ವರ್ಷಗಳಿಂದ ಜಾತ್ಯತೀತ ತಳಹದಿಯ ಮೇಲೆ ಎಲ್ಲ ಧರ್ಮ, ಜಾತಿಯವರು ಸಾಮರಸ್ಯದಿಂದ ಬದುಕುತ್ತಿರುವ ವಾತಾವರಣವನ್ನು ಕೆಲವರು ಕಲುಷಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಹಿಮ್ಮೆಟ್ಟಿಸಬೇಕಾಗಿದೆ. ಜಾತ್ಯತೀತ ತತ್ವವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ಷಡ್ಯಂತ್ರವನ್ನು ಬುಡಮೇಲು ಮಾಡುವ ಹೊಣೆಗಾರಿಕೆ ಕಾಂಗ್ರೆಸ್‌ ಪಕ್ಷದ ಮೇಲಿದೆ’ ಎಂದು ಅವರು ಹೇಳಿದರು.

‘ನೂರಾರು ವರ್ಷಗಳಿಂದ ಕಟ್ಟಿರುವ ಕೋಟೆಯನ್ನು ಒಬ್ಬಿಬ್ಬರು ವಿಷದ ಮಾತಿನ ಮೂಲಕ ಕ್ಷಣ ಮಾತ್ರದಲ್ಲಿ ಒಡೆದು ಬಿಡುತ್ತಾರೆ. ಜಾತಿ ಹೆಸರಿನಲ್ಲಿ ಜನರನ್ನು ಸುಲಭವಾಗಿ ಒಡೆಯಬಹುದು ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಇದನ್ನು ಮನಗಂಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಾತ್ಯತೀತ ತತ್ವದ ಅರಿವು ಮೂಡಿಸಲು ಹಾಗೂ ಪಕ್ಷವನ್ನು ಬಲಪಡಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ’ ಎಂದು ಕಾಗೋಡು ತಿಳಿಸಿದರು.

ಪ್ರತಿಕ್ರಿಯಿಸಿ (+)