ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮಿತ್ರಪಕ್ಷ ಟಿಡಿಪಿ ಸಂಸದರ ಪ್ರತಿಭಟನೆ

Last Updated 5 ಫೆಬ್ರುವರಿ 2018, 7:52 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶ ರಾಜ್ಯ ರಚನೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಮಿತ್ರಪಕ್ಷ ತೆಲುಗು ದೇಶಂ ಪಕ್ಷದ(ಟಿಡಿಪಿ) ಸಂಸದರು ಸಂಸತ್ತಿನ ಗಾಂಧಿ ಪ್ರತಿಮೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಮುಂಬರುವ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಮಾತ್ರ ಕೇಂದ್ರ ಅನುದಾನ ನೀಡುತ್ತಿದೆ. ಎನ್‌ಡಿಎ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕೇಂದ್ರ ಸಂಪೂರ್ಣವಾಗಿ ಕಡೆಗಣಿಸಿದೆ’ ಎಂದು ಪ್ರತಿಭಟನಾ ನಿರತ ಸಂಸದರು ಭಾನುವಾರ ನಡೆದ ಪಕ್ಷದ ಸಭೆ ಬಳಿಕ ಅಸಮಾಧಾನ ವ್ಯಕ್ತಪಡಿಸಿದ್ದರು.

‘ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌, ವಿಶಾಖಪಟ್ಟಣಕ್ಕೆ ಪ್ರತ್ಯೇಕ ರೈಲ್ವೆ ವಲಯ, ಪೋಲಾವರಂ ನೀರಾವರಿ ಯೋಜನೆ ಮತ್ತು ರಾಜಧಾನಿ ಅಮರಾವತಿ ನಿರ್ಮಾಣ ಯೋಜನೆಗೆ  ಅನುದಾನ ನೀಡಬೇಕು’ ಎಂಬುದು ಟಿಡಿಪಿಯ ಒತ್ತಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT