ಮಂಗಳವಾರ, ಡಿಸೆಂಬರ್ 10, 2019
20 °C

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಏಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಏಟು

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರ ಬಳಿ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಕಾರ್ಯಕರ್ತನಿಗೆ ಹೊಡೆದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಇದೇ 10ರಂದು ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಭಾನುವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ನಗರಕ್ಕೆ ಬಂದಿದ್ದರು. ‌

ಸ್ಥಳದಲ್ಲಿ ನೂರಕ್ಕೂ ಹೆಚ್ಚು ಜನ ಕಾರ್ಯಕರ್ತರಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇದೇ ವೇಳೆ ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರು ಶುಭ ಮುಹೂರ್ತದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದರು.

ಪ್ರತಿಕ್ರಿಯಿಸಿ (+)