ಬೆಂಗಳೂರಿನಲ್ಲಿ ರೌಡಿಶೀಟರ್ ಕುಮಾರ್ ಹತ್ಯೆ

7

ಬೆಂಗಳೂರಿನಲ್ಲಿ ರೌಡಿಶೀಟರ್ ಕುಮಾರ್ ಹತ್ಯೆ

Published:
Updated:
ಬೆಂಗಳೂರಿನಲ್ಲಿ ರೌಡಿಶೀಟರ್ ಕುಮಾರ್ ಹತ್ಯೆ

ಬೆಂಗಳೂರು: ಬನಶಂಕರಿ ಠಾಣೆಯ ರೌಡಿಶೀಟರ್ ಕುಮಾರ್ ಎಂಬಾತನನ್ನು ದುಷ್ಕರ್ಮಿಗಳು ಸೋಮವಾರ ಹತ್ಯೆ ಮಾಡಿದ್ದಾರೆ.

ಯಲಚೇನಹಳ್ಳಿ ಮೆಟ್ರೊ ನಿಲ್ದಾಣ ಸಮೀಪ ಈ ಘಟನೆ ನಡೆದಿದೆ. ಹತ್ಯೆಯಾದ ಕುಮಾರ್, ರೌಡಿ ಸೈಕಲ್ ರವಿ ಸಹಚರ. ಕೊಲೆ ಬಗ್ಗೆ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ. ಕುಮಾರ್‌ ಪ್ರಾಣ ಉಳಿಸಿಕೊಳ್ಳಲು ಒಂದು ಕೀ.ಮಿ. ಓಡಿದ್ದಾನೆ. ಆದರೂ ಬೆಂಬಡದೇ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry