ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರಿಗೆ ಭದ್ರತೆ ಒದಗಿಸಲು ಮನವಿ: ರಾಷ್ಟ್ರಪತಿಗಳಿಗೆ ಪತ್ರ

Last Updated 5 ಫೆಬ್ರುವರಿ 2018, 13:14 IST
ಅಕ್ಷರ ಗಾತ್ರ

ಆಗ್ರಾ: ಮುಸ್ಲಿಮರ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲ್ಲಿನ ಮುಸ್ಲಿಮರ ತಂಡವೊಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದೆ.

ಭದ್ರತೆಗೆ ಆಗ್ರಹಿಸಿ ಶಾಹಿದ್‌ ಸ್ಮಾರಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ‘ತಿರಂಗಾ ಯಾತ್ರೆ‘ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಕೈಬಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗದಲ್ಲಿದ್ದ ಶಬಾನಾ ಖಂಡೇಲ್‌ವಾಲ್ ತಿಳಿಸಿದ್ದಾರೆ.

ಕಾಸ್‌ಗಂಜ್‌ ಗಲಭೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಕೊಲೆಯಾಗಿರುವ ಚಂದನ್‌ ಗುಪ್ತಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದೂ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT