ಶುಕ್ರವಾರ, ಡಿಸೆಂಬರ್ 6, 2019
25 °C

‘ಗಂಭೀರ ಚರ್ಚೆ ನಡೆಯಲಿ’

Published:
Updated:
‘ಗಂಭೀರ ಚರ್ಚೆ ನಡೆಯಲಿ’

ಸಿನಿ ಜಗತ್ತಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಈಗ ಮತ್ತೊಮ್ಮೆ ನಟಿಯರು ಮಾತನಾಡಲು ಆರಂಭಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದ್ದ ‘ಮೀ ಟೂ’ ಅಭಿಯಾನ ಕುರಿತು ಕಳೆದ ಅಕ್ಟೋಬರ್‌ನಲ್ಲಿಯೇ ಬಾಲಿವುಡ್‌ ನಟಿ ರಿಚಾ ಛಡ್ಡಾ ಇಷ್ಟುದ್ದದ ಲೇಖನವನ್ನು ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ರಿಚಾ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ.

‘ಲೈಂಗಿಕ ದೌರ್ಜನ್ಯದಂಥ ವಿಷಯಗಳನ್ನು ಎಂದಿಗೂ ಮರೆಯಬಾರದು. ಶೋಷಕರಿಗೆ ಕ್ಷಮೆಯೂ ಸಿಗಬಾರದು. ಇದು ನಿರ್ಲಕ್ಷಿಸುವ ಅಥವಾ ಮರೆತುಬಿಡುವ ಕೆಟ್ಟ ಕನಸಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ಪೋಸ್ಟ್ ಮಾಡಿ ಜನಪ್ರಿಯತೆ ಪಡೆದುಕೊಳ್ಳುವ ಸಮಯವೂ ಇದಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಚರ್ಚೆ ನಡೆಯಬೇಕಿದೆ. ಈ ವಿಷಯವನ್ನು ಇನ್ನಷ್ಟು ಸೂಕ್ಷ್ಮವಾಗಿ ಚರ್ಚಿಸಬೇಕಿದೆ. ಹೆಣ್ಣು ಭ್ರೂಣಹತ್ಯೆ ಹಾಗೂ ಅತ್ಯಾಚಾರದಷ್ಟೇ ತೀವ್ರವಾಗಿ ಸಮಾಜ ಈ ವಿಷಯವನ್ನು ಪರಿಗಣಿಸಬೇಕಿದೆ’ ಎಂದಿದ್ದಾರೆ ರಿಚಾ. 

ಪ್ರತಿಕ್ರಿಯಿಸಿ (+)