ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳು ಮಾಹಿತಿ’

Last Updated 5 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ಮೂಲಕ ಸುಳ್ಳು ಅಂಕಿ– ಅಂಶಗಳನ್ನು ನೀಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಟೀಕಿಸಿದರು.

ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ಆರೋಗ್ಯ, ನಗರಾಭಿವೃದ್ಧಿ, ನೀರಾವರಿ, ಸಮಾಜಕಲ್ಯಾಣ ಮತ್ತು ಇತರ ಪ್ರಮುಖ ಇಲಾಖೆಗಳ ಪ್ರಗತಿಗೆ ಸಂಬಂಧಿಸಿದ ಅಂಕಿ– ಅಂಶಗಳು ಸತ್ಯಕ್ಕೆ ದೂರ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ರಾಜ್ಯಪಾಲರ ಭಾಷಣದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಬಿಂಬಿಸಲಾಗಿದೆ ಎಂದರು.

ವೈಫಲ್ಯದ ನಗ್ನ ದರ್ಶನ: ಈಶ್ವರಪ್ಪ

ರಾಜ್ಯಪಾಲರ ಭಾಷಣದ ಮೂಲಕ ರಾಜ್ಯ ಸರ್ಕಾರದ ವೈಫಲ್ಯಗಳ ನಗ್ನ ದರ್ಶನವಾಗಿದೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

ರಾಜ್ಯಪಾಲರು ಕೋಮು ಸೌಹಾರ್ದತೆ ಮತ್ತು ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ಆದರೆ, ಪ್ರತಿನಿತ್ಯ ಹಿಂದೂ ಯುವಕರ ಕಗ್ಗೊಲೆಗಳು ನಡೆಯುತ್ತಿವೆ. ಇದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಈ ಹತ್ಯೆಗಳನ್ನು ನಡೆಸುತ್ತಿರುವವರಿಗೆ ಸರ್ಕಾರದ ಅಭಯ ಇದೆ ಎಂದು ಹೇಳಿದರು.

ಹೈದ್ರಾಬಾದ್‌– ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಹಣ ನೀಡುವುದಾಗಿ ಹೇಳಿ, ಅಷ್ಟು ಪ್ರಮಾಣದ ಹಣವನ್ನು ನೀಡಿಲ್ಲ. ಈ ಭಾಗದಲ್ಲಿ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತಿಳಿಸಿದ್ದರು. ಇಲ್ಲಿಯತನಕ ಕೇವಲ 18 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪ್ರತಿ ವರ್ಷ ₹ 10,000 ಕೋಟಿ ನೀಡುವುದಾಗಿ ಹೇಳಿದ್ದರು. ಆದರೆ, ನಾಲ್ಕೂವರೆ ವರ್ಷಗಳಲ್ಲಿ ₹ 6995 ಕೋಟಿ ಮಾತ್ರ ನೀಡಿದ್ದಾರೆ ಎಂದು ತಿಳಿಸಿದರು.

ಮಹದಾಯಿ ಪ್ರಸ್ತಾಪ ಇಲ್ಲ: ಹೊರಟ್ಟಿ

ಮಹದಾಯಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ವಿಷಯವನ್ನು ಭಾಷಣದಲ್ಲಿ ಪ್ರಸ್ತಾಪಿಸದೇ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ವಿಧಾನಪರಿಷತ್ ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ ಹೇಳಿದರು.

ರಾಜ್ಯ ಸರ್ಕಾರದ ಯೋಜನೆಗಳನ್ನೇ ರಾಜ್ಯಪಾಲರು ಒಪ್ಪಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಭಾಷಣ ಪುನರಾವರ್ತನೆ ಆಗಿದೆ. ಕೃಷಿ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ದೂರಿದರು.

ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವಾಯುವ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದರೂ ಅದರ ಬಗ್ಗೆ ಚಕಾರ ಎತ್ತಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT