ಗುರುವಾರ , ಮೇ 28, 2020
27 °C

ಮಹದಾಯಿ: ಇಂದಿನಿಂದ ಅಂತಿಮ ಹಂತದ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹದಾಯಿ: ಇಂದಿನಿಂದ ಅಂತಿಮ ಹಂತದ ವಿಚಾರಣೆ

ನವದೆಹಲಿ: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಮಹದಾಯಿ ನದಿ ನೀರಿನ ಹಂಚಿಕೆ ಕುರಿತ ಪ್ರಕರಣದ ಅಂತಿಮ ಹಂತದ ವಿಚಾರಣೆಯು ಮಹದಾಯಿ ಜಲವಿವಾದ ನ್ಯಾಯಮಂಡಳಿಯಲ್ಲಿ ಮಂಗಳವಾರದಿಂದ ಆರಂಭವಾಗಲಿದೆ.

ಪ್ರಕರಣದ ವಿಚಾರಣೆ ನಡೆದಿರುವಾಗಲೇ ಕರ್ನಾಟಕ ಸರ್ಕಾರವು ಕಳಸಾ ನಾಲೆಯ ತಿರುವು ಯೋಜನೆಯನ್ನು ಅಕ್ರಮವಾಗಿ ಆರಂಭಿಸುವ ಮೂಲಕ ನ್ಯಾಯಮಂಡಳಿಯ ಈ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ ಎಂದು ದೂರಿ ಕಳೆದ ತಿಂಗಳು ಗೋವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ನ್ಯಾಯಮಂಡಳಿಗೆ ಉತ್ತರ ನೀಡಿದೆ.

ಜಲವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಪರ ವಾದ ಮಂಡಿಸಿರುವ ಹಿರಿಯ ವಕೀಲ ಫಾಲಿ ನಾರಿಮನ್‌ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ಅವರ ಬದಲಿಗೆ ಅಶೋಕ್‌ ದೇಸಾಯಿ ಹಾಗೂ ಇಂದಿರಾ ಜೈಸಿಂಗ್‌ ಅವರು ಅಂತಿಮ ಹಂತದ ವಿಚಾರಣೆಯ ವೇಳೆ ವಾದ ಮಂಡಿಸಲಿದ್ದಾರೆ.

ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್‌ ನೇತೃತ್ವದ ಪೀಠವು ಈಗಾಗಲೇ ಮೂರು ರಾಜ್ಯಗಳ ಸಾಕ್ಷ್ಯಗಳ ಪಾಟೀ ಸವಾಲು ಆಲಿಸಿದ್ದು, ಅಂತಿಮ ಹಂತದ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಆಗಸ್ಟ್‌ ಒಳಗಾಗಿ ಐತೀರ್ಪು ಪ್ರಕಟಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.