ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ?

7

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ?

Published:
Updated:

ಬೆಂಗಳೂರು: ಏಪ್ರಿಲ್ 2ಕ್ಕೆ ಅವಧಿ ಮುಕ್ತಾಯಗೊಳ್ಳಲಿರುವ ನಾಲ್ವರು ರಾಜ್ಯಸಭಾ ಸದಸ್ಯರ ಆಯ್ಕೆಗೆ ವಿಧಾನಸಭೆ ಚುನಾವಣೆಗೂ ಮೊದಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜ್ಯ ವಿಧಾನಸಭಾ ಸದಸ್ಯರಿಂದ 2012ರಲ್ಲಿ ಆಯ್ಕೆಯಾಗಿರುವ ಕೆ.ರೆಹಮಾನ್ ಖಾನ್ (ಕಾಂಗ್ರೆಸ್‌), ಎಂ. ರಾಜೀವ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ ಸೇಡಂ ಹಾಗೂ ಆರ್. ರಾಮಕೃಷ್ಣ (ಇಬ್ಬರು ಬಿಜೆಪಿ) ಅವಧಿ ಪೂರ್ಣಗೊಳ್ಳಲಿದೆ.

ವಿಧಾನಸಭೆ ಚುನಾವಣೆ ಬಳಿಕ ಆಯ್ಕೆ ಪ್ರಕ್ರಿಯೆ ನಡೆದರೆ ಸುಮಾರು ಒಂದೂವರೆ ತಿಂಗಳು ಈ ಸ್ಥಾನಗಳು ಖಾಲಿ ಉಳಿಯಲಿವೆ. ಹೀಗಾಗಿ, ವಿಧಾನಸಭಾ ನೀತಿ ಸಂಹಿತೆ ಘೋಷಣೆಯಾಗುವ ಮುನ್ನವೇ ರಾಜ್ಯಸಭೆ ಸದಸ್ಯರ ಆಯ್ಕೆಗೆ ಮತದಾನದ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.‌

ಜೆಡಿಎಸ್‌ನಿಂದ ಕಾಂಗ್ರೆಸ್‌ನತ್ತ ಮುಖ ಮಾಡಿರುವ ಜಮೀರ್ ಅಹಮದ್, ಚೆಲುವರಾಯಸ್ವಾಮಿ ಸೇರಿದಂತೆ ಏಳು ಸದಸ್ಯರು ಈ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ರಾಜ್ಯಸಭೆ ಚುನಾವಣೆ ಬಳಿಕವೇ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಸೂಚಿಸಿದೆ ಎಂದು ಮೂಲಗಳು ಹೇಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry