ಮಂಗಳವಾರ, ಡಿಸೆಂಬರ್ 10, 2019
20 °C

ಖಾತಾ ವರ್ಗಾವಣೆ: ಆನ್‌ಲೈನ್‌ನಲ್ಲೇ ಪ್ರಮಾಣಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖಾತಾ ವರ್ಗಾವಣೆ: ಆನ್‌ಲೈನ್‌ನಲ್ಲೇ  ಪ್ರಮಾಣಪತ್ರ

ಬೆಂಗಳೂರು: ಆಸ್ತಿ ಮಾಲೀಕರು ಖಾತಾ ವರ್ಗಾವಣೆ ಪ್ರಮಾಣಪತ್ರ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಆನ್‌ಲೈನ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಸಕಾಲ ಆನ್‌ಲೈನ್‌ ಪೋರ್ಟಲ್‌ ಹಾಗೂ ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ಪ್ರಮಾಣಪತ್ರ ಪಡೆಯಬಹುದು.

ಪ್ರಮಾಣಪತ್ರಕ್ಕಾಗಿ ಸಕಾಲ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕೆ ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಈ ವೇಳೆ ಸಕಾಲ ಸ್ವೀಕೃತಿ ಸಂಖ್ಯೆಯನ್ನು ನೀಡಲಾಗುತ್ತದೆ. ಇದನ್ನು ಆಸ್ತಿ ಮಾಲೀಕರು ಇಟ್ಟುಕೊಂಡಿರಬೇಕು. ಪಾಲಿಕೆ ಅಧಿಕಾರಿಗಳ ಬಳಿಯೂ ಈ ಸಂಖ್ಯೆ ಇರುತ್ತದೆ. ಅರ್ಜಿಯು ಯಾವ ಹಂತದಲ್ಲಿದೆ ಎಂಬ ಪ್ರತಿ ಮಾಹಿತಿಯನ್ನೂ ಆಸ್ತಿ ಮಾಲೀಕರಿಗೆ ಎಸ್‌ಎಂಎಸ್‌ ಮೂಲಕ ಕಳುಹಿಸಲಾಗುತ್ತದೆ.

ಆಸ್ತಿ ಮಾಲೀಕರು ಸಲ್ಲಿಸಿರುವ ದಾಖಲೆಗಳು ಸರಿ ಇದ್ದರೆ ಮಾತ್ರ ಖಾತಾ ವರ್ಗಾವಣೆ ಪ್ರಮಾಣಪತ್ರ ನೀಡಲಾಗುತ್ತದೆ. ದಾಖಲೆಗಳು ಸರಿ ಇಲ್ಲದಿದ್ದರೆ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಪ್ರತಿಕ್ರಿಯಿಸಿ (+)