ಮತಗಟ್ಟೆಗಳಲ್ಲಿ ಮೂಲಸೌಕರ್ಯಕ್ಕೆ ₹ 28 ಕೋಟಿ ಅಂದಾಜು

7

ಮತಗಟ್ಟೆಗಳಲ್ಲಿ ಮೂಲಸೌಕರ್ಯಕ್ಕೆ ₹ 28 ಕೋಟಿ ಅಂದಾಜು

Published:
Updated:

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯದ 13,000 ಮತಗಟ್ಟೆಗಳಲ್ಲಿ ಮೂಲಸೌಕರ್ಯ ಒದಗಿಸಲು ₹ 28 ಕೋಟಿ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.

ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮೂಲಸೌಲಭ್ಯ ಪರಿಶೀಲನಾ ಸಮಿತಿ ಸಭೆಯಲ್ಲಿ ಎಲ್ಲ ಜಿಲ್ಲೆಗಳಿಂದ ಬಂದ ಮಾಹಿತಿಗಳನ್ನು ಕ್ರೋಡೀಕರಿಸಲಾಗಿದ್ದು, ಆ ಸಭೆಯಲ್ಲಿ ಹಣ ಬಿಡುಗಡೆಗೆ ತೀರ್ಮಾನಿಸಲಾಗಿದೆ.

ಈ ಪೈಕಿ, ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಮಾತ್ರ ₹ 5 ಕೋಟಿ ಅಗತ್ಯವಿದೆ ಎಂದೂ ಅಂದಾಜಿಸಲಾಗಿದೆ.

ಶಾಲೆಗಳು, ಸಮುದಾಯ ಕೇಂದ್ರಗಳು ಮತಗಟ್ಟೆಗಳಾಗಿ ಬಳಕೆ ಆಗಲಿವೆ. ಈ ಕೇಂದ್ರಗಳಲ್ಲಿ ಶೌಚಾಲಯ, ಮತ ಚಲಾಯಿಸಲು ಬರುವ ಅಂಗವಿಕಲರಿಗೆ ಇಳಿಜಾರು ವ್ಯವಸ್ಥೆ ಸೇರಿ ವಿವಿಧ ಮೂಲಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ ಈ ಕೆಲಸ ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry