ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳಾ ಕಾಲೇಜಿಗೆ ಅಗತ್ಯ ಸೌಲಭ್ಯ’

Last Updated 6 ಫೆಬ್ರುವರಿ 2018, 9:26 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿರುವ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿಗೆ ಮೂಲ ಸೌಲಭ್ಯ ಕಲ್ಪಿಸುವ ಕುರಿತು ಇತ್ತೀಚೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡವಿಲ್ಲದೆ, ಶಿಥಿಲಗೊಂಡಿರುವ ಕೊಠಡಿಗಳಲ್ಲಿ ಪಾಠಗಳು ನಡೆಯುತ್ತಿವೆ. ಪೀಠೋಪಕರಣಗಳ ಕೊರತೆ, ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯದ ಪ್ರತ್ಯೇಕ ಕೊಠಡಿಗಳಿಲ್ಲದೆ ವಿದ್ಯಾರ್ಥಿನಿಯರು ಪರಿತಪಿಸುತ್ತಿದ್ದಾರೆ ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರು ಶಾಸಕರಿಗೆ ಅಹವಾಲು ಸಲ್ಲಿಸಿದರು.

ಬಳಿಕ ಮಾತನಾಡಿದ ಶಾಸಕರು, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರ ಸಹಕಾರ ಪಡೆದು ಜಿಲ್ಲಾ ಕೇಂದ್ರದಲ್ಲಿ ಮಾದರಿ ಕಾಲೇಜು ಕಟ್ಟಡ ನಿರ್ಮಿಸಲು ಶ್ರಮಿಸಲಾಗುವುದು. ತಾತ್ಕಾಲಿಕವಾಗಿ ರೇಷ್ಮೆ ಇಲಾಖೆ ಕಟ್ಟಡಕ್ಕೆ ಕಾಲೇಜು ಸ್ಥಳಾಂತರಿಸಿ ಅಗತ್ಯ ಸೌಲಭ್ಯಗಳನ್ನು ಶೀಘ್ರವಾಗಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಗೆ ವೈದ್ಯಕೀಯ ಎಂಜಿನಿಯರಿಂಗ್ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಮುಂದೆ ಕಾನೂನು ಕಾಲೇಜು ಪ್ರಾರಂಭಿಸಲಾಗುವುದು. ವಿದ್ಯಾರ್ಥಿ ಗಳು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಜಯಸಿಂಹ, ಸಿ.ಎಂ.ನರಸಿಂಹಮೂರ್ತಿ, ಮಹಮದ್ ಅಸ್ಗರ್ ಮುನ್ನಾ, ಎಲ್.ಸುರೇಶ್, ಪ್ರಭುರಾಮ್, ರಮ್ಯಾ, ಪ್ರಾಂಶುಪಾಲರಾದ ಸುಮತಿ, ಉಪನ್ಯಾಸಕರಾದ ರುಕ್ಮಿಣಿ, ಪ್ರಭಾವತಿ, ಡಾ.ಮಂಜುನಾಥ, ಪಾರ್ವತಿ, ಸಿದ್ದರಾಜು, ಮಂಜುನಾಥ, ಸಾಕಮ್ಮ, ಕುಸುಮಾಕುಮಾರಿ, ನಿವೃತ್ತ ಶಿಕ್ಷಕ ಲಿಂಗಣ್ಣ, ಬಾಲಸುಬ್ರಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT