ಶುಕ್ರವಾರ, ಡಿಸೆಂಬರ್ 13, 2019
27 °C

ಶ್ರೀನಗರದ ಎಸ್‌ಎಂಎಚ್‌ಎಸ್‌ ಆಸ್ಪತ್ರೆಯಲ್ಲಿ ಉಗ್ರರ ಗುಂಡಿನ ದಾಳಿಗೆ ಇಬ್ಬರು ಪೊಲೀಸ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರದ ಎಸ್‌ಎಂಎಚ್‌ಎಸ್‌ ಆಸ್ಪತ್ರೆಯಲ್ಲಿ ಉಗ್ರರ ಗುಂಡಿನ ದಾಳಿಗೆ ಇಬ್ಬರು ಪೊಲೀಸ್‌ ಸಾವು

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಶ್ರೀ ಮಹಾರಾಜ ಹರಿ ಸಿಂಗ್‌(ಎಸ್‌ಎಂಎಚ್‌ಎಸ್‌) ಆಸ್ಪತ್ರೆಯಲ್ಲಿ ಉಗ್ರರು ಮತ್ತು ಪೊಲೀಸರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪ್ಟಿದ್ದಾರೆ.

ಪಾಕಿಸ್ತಾನದ ಉಗ್ರ ನಾವಿದ್ ಜತ್‌ ಅಲಿಯಾಸ್‌ ಅಬು ಹಂಜುಲ್ಲಾನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಭದ್ರತೆಯೊಂದಿಗೆ ಕರೆತರಲಾಗಿತ್ತು. ಈ ವೇಳೆ ಉಗ್ರ ಪರಾರಿಯಾಗಲು ನೆರವಾಗುವಂತೆ ಇತರ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಚಿಕಿತ್ಸೆಗೆ ಕರೆತಂದಿದ್ದ ಉಗ್ರ ಪರಾರಿಯಾಗಿದ್ದು, ದಾಳಿ ನಡೆಸಿದ ಉಗ್ರರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಗುಂಡೇಟಿಗೆ ಒಬ್ಬ ಪೊಲೀಸ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬ ಪೊಲೀಸ್‌ ಕೆಲ ಸಮಯದ ಬಳಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕಿತ್ಸೆಗಾಗಿ ಕರೆತರಲಾಗಿದ್ದ ಉಗ್ರನನ್ನು 2014ರಲ್ಲಿ ದಕ್ಷಿಣ ಪುಲ್ವಾಮ ಜಿಲ್ಲೆಯಲ್ಲಿ ಕೋರ್ಟ್‌ ಬಳಿ ನಡೆದಿದ್ದ ಪೊಲೀಸ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪೊಲೀಸರ ವಶದಲ್ಲಿದ್ದ ಉಗ್ರನನ್ನು ಚಿಕಿತ್ಸೆಗಾಗಿ ಕರೆತರಲಾಗಿತ್ತು.

ಪ್ರತಿಕ್ರಿಯಿಸಿ (+)