7

ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ, ಪಿಡಿಒ ಎಸಿಬಿ ಬಲೆಗೆ

Published:
Updated:
ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ, ಪಿಡಿಒ ಎಸಿಬಿ ಬಲೆಗೆ

ಮಂಗಳೂರು: ರಸ್ತೆ, ಮೋರಿ ಮತ್ತಿತರ ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ₹ 35,000 ಲಂಚ ಪಡೆಯುತ್ತಿದ್ದ ಇಲ್ಲಿನ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸೆಬಾಸ್ಟಿಯನ್‌ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಉಮ್ಮರ್ ಎಂಬ ಗುತ್ತಿಗೆದಾರರು ₹ 5.5 ಲಕ್ಷ ಮೊತ್ತದ ಕಾಮಗಾರಿ ನಿರ್ವಹಿಸಿದ್ದರು. ಬಿಲ್‌ ಪಾವತಿಗೆ ಸೆಬಾಸ್ಟಿಯನ್ ಮತ್ತು ಪುರುಷೋತ್ತಮ್ ₹ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುತ್ತಿಗೆದಾರರು ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ ಪಂಚಾಯಿತಿ ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಪೊಲೀಸರು ಇಬ್ಬರನ್ನೂ ಬಂಧಿಸಿದರು.

ಎಸಿಬಿ ಪಶ್ಚಿಮ ವಲಯ ಎಸ್‌ಪಿ ಎನ್‌.ಎಸ್‌.ಶೃತಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಸುಧೀರ್ ಎಂ.ಹೆಗ್ಡೆ, ಇನ್‌ಸ್ಪೆಕ್ಟರ್ ಯೋಗೇಶ್‌ ಕುಮಾರ್ ನಾಯಕ್‌ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry