ಅಕ್ರಮ ತಡೆಯಬೇಕು!

4

ಅಕ್ರಮ ತಡೆಯಬೇಕು!

Published:
Updated:

ನೆರೆರಾಷ್ಟ್ರಗಳಿಂದ ಅಕ್ರಮವಾಗಿ ದೇಶದೊಳಗೆ ನುಸುಳಿ, ಇಲ್ಲಿ ಜೀವನ ನಡೆಸುತ್ತಿರುವ ಸಾವಿರಾರು ಜನರಿದ್ದಾರೆ.

ಕರ್ನಾಟಕದಲ್ಲೂ ಅಂಥ ಸಾಕಷ್ಟು ಜನರು ಇರಬಹುದು. ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಮುಂದಾಗಿರುವ ರಾಜಕೀಯ ಪಕ್ಷಗಳು, ಈಗ ಇಂಥ ಅಕ್ರಮ ವಲಸಿಗರನ್ನೂ ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ಮಾಡುತ್ತಿವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲವು ರಾಜಕಾರಣಿಗಳು ಇಂಥವರಿಗೆ ಮತದಾರರ ಗುರುತಿನ ಚೀಟಿ ಕೊಡಿಸಲು ಓಡಾಡುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಇದು ನಿಜವಾಗಿದ್ದಲ್ಲಿ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಈ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ನಡೆಯುತ್ತಿದ್ದರೆ ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry