ಬುಧವಾರ, ಡಿಸೆಂಬರ್ 11, 2019
16 °C

ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ದಿನೇಶ್ ಮಹೇಶ್ವರಿ ಅವರನ್ನು ನೇಮಕಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಮಾಡಿದ್ದ ಶಿಫಾರಸಿಗೆ ಮಂಗಳವಾರ ರಾಷ್ಟ್ರಪತಿ ಅಂಕಿತ ದೊರೆತಿದೆ.

ನ್ಯಾಯಮೂರ್ತಿ ದಿನೇಶ್ ಅವರು ಸದ್ಯ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ವರ್ಗಾವಣೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಒಪ್ಪಿಗೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಅವರ ನಿವೃತ್ತಿಯಿಂದ ಕಳೆದ ಅಕ್ಟೋಬರ್‌ 9ರಿಂದ ಖಾಲಿ ಇರುವ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸ್ಥಾನದಲ್ಲಿ ನ್ಯಾಯಮೂರ್ತಿ ಎಚ್.ಜಿ. ರಮೇಶ್‌ ಪ್ರಭಾರ ಸೇವೆಯಲ್ಲಿದ್ದಾರೆ. ಫೆಬ್ರುವರಿ 20ರೊಳಗೆ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪ್ರತಿಕ್ರಿಯಿಸಿ (+)