ಶುಕ್ರವಾರ, ಡಿಸೆಂಬರ್ 13, 2019
27 °C

‘ಶ್ರೀ ಎಂ’ಗೆ ವಿಜ್ಞಾತಂ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಶ್ರೀ ಎಂ’ಗೆ ವಿಜ್ಞಾತಂ ರಾಷ್ಟ್ರೀಯ ಪ್ರಶಸ್ತಿ

ನಾಗಮಂಗಲ: ತಾಲ್ಲೂಕಿನ ಆದಿಚುಂಚನಗಿರಿ ಮಠ ಪ್ರತಿ ವರ್ಷ ಕೊಡಮಾಡುವ ವಿಜ್ಞಾತಂ ರಾಷ್ಟ್ರೀಯ ಪ್ರಶಸ್ತಿಗೆ ಕೇರಳದ ತಿರುವನಂತಪುರಂನ ಸತ್ಸಂಗ ಫೌಂಡೇಷನ್ ಸ್ಥಾಪಕ ಎಂ.ಮುಮ್ತಾಜ್ ಅಲಿ (ಶ್ರೀ ಎಂ) ಆಯ್ಕೆಯಾಗಿದ್ದಾರೆ ಎಂದು ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

‘ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪಟ್ಟಾಭಿಷೇಕ ವಾರ್ಷಿಕೋತ್ಸವದ ಅಂಗವಾಗಿ ಫೆ.20ರಂದು ಕ್ಷೇತ್ರದಲ್ಲಿ ನಡೆಯಲಿರುವ ಜ್ಞಾನ–ವಿಜ್ಞಾನ–ತಂತ್ರಜ್ಞಾನ ಮೇಳದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರತಿಕ್ರಿಯಿಸಿ (+)