ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡ ಮುದ್ದೇಬಿಹಾಳಕ್ಕೆ ಭೇಟಿ 9ಕ್ಕೆ

Last Updated 7 ಫೆಬ್ರುವರಿ 2018, 7:26 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಫೆ.9 ರಂದು ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳಲ್ಲಿ ಪ್ರವಾಸ ಕೈಕೊಂಡು ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷ ಸಂಘಟನೆ ನಡೆಸಲಿದ್ದಾರೆ ಎಂದು ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು.

ಬಸರಕೋಡದ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನ ಕಮೀಟಿ ಸಹಕಾರರೊಂದಿಗೆ ತಾವು ಆಯೋಜಿಸಿರುವ ಉಚಿತ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಅಂದು ಸಂಜೆ 4ಕ್ಕೆ ದೇವರ ಹಿಪ್ಪರಗಿ ಮತಕ್ಷೇತ್ರದ ಕಲಕೇರಿಗೆ ತೆರಳಿ ಅಲ್ಲಿ ಸಂಘಟಿಸಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ಈಗಾಗಲೇ ಮುದ್ದೇಬಿಹಾಳ, ದೇ.ಹಿಪ್ಪರಗಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕುಮಾರಪರ್ವ ಭಾಗ–2 ಕಾರ್ಯಕ್ರಮ ಯಶಸ್ವಿಗೊಳಿಸಲಾಗಿದೆ. ಈಗ ಮಾಜಿ ಪ್ರಧಾನಿಗಳ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಲು ಜೆಡಿಎಸ್ ಮುಖಂಡರು, ಕಾರ್ಯರ್ಕತರು ಹಗಲಿರುಳು ಸಂಘಟನೆಯಲ್ಲಿ ತೊಡಗಿ ಶ್ರಮಿಸುತ್ತಿದ್ದಾರೆ ಎಂದರು.

ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆದ ಸಂದರ್ಭ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಹು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಆಲಮಟ್ಟಿ ಜಲಾಶಯ ಎತ್ತರಿಸುವಲ್ಲಿ, ಆಲಮಟ್ಟಿ ಎಡದಂಡೆ ಕಾಲುವೆ ಮೂಲಕ ರೈತರ ಜಮೀನುಗಳಿಗೆ ಕೃಷ್ಣೆಯ ನೀರು ಕೊಡುವಲ್ಲಿ, ವಿಜಯಪುರ ಜಿಲ್ಲೆಯಾದ್ಯಂತ ನೀರಾವರಿ ಯೋಜನೆ ಜಾರಿಗೊಳಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

ಹಿಂದೆ ಜನತಾ ಪರಿವಾರ ಸರ್ಕಾರದಲ್ಲಿ ಸಚಿವರಾಗಿದ್ದ ದಿ.ಜೆ.ಎಸ್.ದೇಶಮುಖ, ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅವರ ಮೂಲಕ ಈ ಭಾಗದಲ್ಲಿ ಜಾರಿಗೊಳಿಸಿರುವ ಅನೇಕ ಜನಪರ ಕೆಲಸ, ಕೊಡುಗೆಗಳನ್ನು ಜನತೆಯ ಮುಂದಿಡಲು, ಜೆಡಿಎಸ್ ಕಾರ್ಯಕರ್ತರಲ್ಲಿ ಪಕ್ಷ ಸಂಘಟನೆ ಹುಮ್ಮಸ್ಸು ತುಂಬಲು ದೇವೇಗೌಡರು ವಿಶೇಷ ಯೋಜನೆ ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ನಾಯಕಿ ಮಹಾದೇವಿ ಪಾಟೀಲ ನಡಹಳ್ಳಿ, ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಸರಸ್ವತಿ ಪೀರಾಪುರ, ತಾಲ್ಲೂಕು ಘಟಕದ ಅಧ್ಯಕ್ಷೆ ಸಂಗಮ್ಮ ದೇವರಹಳ್ಳಿ, ತಾಲ್ಲೂಕು ಜೆಡಿಎಸ್ ಉಪಾಧ್ಯಕ್ಷ ಶರಣು ಬೂದಿಹಾಳಮಠ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT