ಬುಧವಾರ, ಡಿಸೆಂಬರ್ 11, 2019
26 °C
ರ‍್ಯಾಂಗಿಂಗ್‌ ಆರೋಪ ಮಾಡಿದ ಪೋಷಕರು

ಕಾಲೇಜು ಚುನಾವಣೆಯಲ್ಲಿ ಸೋತ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಲೇಜು ಚುನಾವಣೆಯಲ್ಲಿ ಸೋತ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಕಾಲೇಜು ಚುನಾವಣೆಯಲ್ಲಿ ಸೋತ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಮೇಘನಾ ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ನ ದಯಾನಂದ ಸಾಗರ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಸಹಪಾಠಿಗಳಿಂದ ರ‍್ಯಾಂಗಿಂಗ್‌ ಕಿರುಕುಳಕ್ಕೆ ಬೇಸತ್ತು ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಬಗ್ಗೆ ಸರಿಯಾಗಿ ಗಮನ ಹರಿಸುತ್ತಿಲ್ಲ’ ಎಂದು ಮೇಘನಾ ಪೋಷಕರು ಆರೋಪಿಸಿದ್ದಾರೆ.

ಘಟನೆ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)