ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ: ಇಂದ್ರಾಣಿ ಮುಖರ್ಜಿಗೆ ನ್ಯಾಯಾಂಗ ಬಂಧನ

7

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ: ಇಂದ್ರಾಣಿ ಮುಖರ್ಜಿಗೆ ನ್ಯಾಯಾಂಗ ಬಂಧನ

Published:
Updated:
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ: ಇಂದ್ರಾಣಿ ಮುಖರ್ಜಿಗೆ ನ್ಯಾಯಾಂಗ ಬಂಧನ

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರನ್ನು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುನೀಲ್ ರಾಣಾ ಹೇಳಿದ್ದಾರೆ.

ಎರಡು ದಿನಗಳ ಕಾಲ ಸಿಬಿಐ ಅಧಿಕಾರಿಗಳ ವಶದಲ್ಲಿದ್ದ ಇಂದ್ರಾಣಿ ಅವರ ತನಿಖೆ ಬುಧವಾರ ಮುಕ್ತಾಯವಾಗಲಿದೆ. ಇಂದೇ ಅವರನ್ನು ಮುಂಬೈಗೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂ ಮಗ ಕಾರ್ತಿ ಚಿದಂಬರಂ ಅವರ ಹೆಸರು ಕೂಡ ಕೇಳಿ ಬಂದಿತ್ತು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry