ನಾಳೆ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಬಂದ್

7

ನಾಳೆ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಬಂದ್

Published:
Updated:
ನಾಳೆ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಬಂದ್

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ಬಿಸಿಯೂಟ ಕಾರ್ಯಕರ್ತರು ಗುರುವಾರ ವಿಧಾನ ಸೌಧ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಸಿಐಟಿಯು ಸಂಘನೆ ಪ್ರತಿಭಟನೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂಘಟನೆಯ ಅಧ್ಯಕ್ಷೆ ವರಲಕ್ಷ್ಮೀ ನೇತೃತ್ವದಲ್ಲಿ ಕಾರ್ಯಕರ್ತರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದೆಲ್ಲೆಡೆಯಿಂದ ಬಿಸಿಯೂಟ ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಯಲ್ಲಿ ಭಾಗಿಯಾಗಲಿರುವುದರಿಂದ ಗುರುವಾರ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಸೌಲಭ್ಯ ದೊರೆಯುವುದಿಲ್ಲ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆಸ್ಟೇಷನ್‌ನಿಂದ ತೆರಳಲಿರುವ ಕಾರ್ಯಕರ್ತರು ವಿಧಾನಸೌದಕ್ಕೆ ಮುತ್ತಿಗೆ ಹಾಕಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry