ಸೋಮವಾರ, ಡಿಸೆಂಬರ್ 9, 2019
24 °C

ಸಂಸತ್ತಿನಲ್ಲಿ ನನ್ನನ್ನು ನೆನಪಿಸಿಕೊಂಡದ್ದಕ್ಕೆ ಧನ್ಯವಾದ: ಮೋದಿಗೆ ಸಿದ್ದರಾಮಯ್ಯ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಸತ್ತಿನಲ್ಲಿ ನನ್ನನ್ನು ನೆನಪಿಸಿಕೊಂಡದ್ದಕ್ಕೆ ಧನ್ಯವಾದ: ಮೋದಿಗೆ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಸಂಸತ್‌ನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ನೀವು ಸಂಸತ್‌ನಲ್ಲಿ ನನ್ನನ್ನು ಮತ್ತು ಬಸವಣ್ಣನವರನ್ನು ನೆನಪಿಸಿಕೊಂಡಿದ್ದರಿಂದ ಸಂತಸವಾಗಿದೆ. ಉಳ್ಳವರು ಶಿವಾಲಯ ಮಾಡುವರು, ನಾನೇನು ಮಾಡಲಿ ಬಡವನಯ್ಯಾ ಎಂದು ಬಸವಣ್ಣ ಹೇಳಿದ್ದರು. ಬಸವಣ್ಣನವರ ತತ್ವಗಳನ್ನು ನೀವು ಅನುಸರಿಸಿದರೆ ಕನ್ನಡಿಗರು ನಿಮಗೆ ಧನ್ಯವಾದ ಹೇಳುತ್ತಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಬೀದರ್–ಕಲಬುರ್ಗಿ ರೈಲ್ವೆ ಮಾರ್ಗ ಯೋಜನೆಗೆ ಅನುಮತಿ ನೀಡಲಾಗಿತ್ತು. 2004ರಿಂದ 2013ರ ವರೆಗೆ ಏನೂ ಕೆಲಸವಾಗಿಲ್ಲ’ ಎಂದು ಮೋದಿ ಆರೋಪಿಸಿದ್ದಕ್ಕೂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‘50:50 ಅನುದಾನ ಹಂಚಿಕೆಯಲ್ಲಿ ರೈಲ್ವೆ ಅಭಿವೃದ್ಧಿಗೆ ಮುಂದಾದ ಮೊದಲ ರಾಜ್ಯ ಕರ್ನಾಟಕ. ₹ 1,542 ಕೋಟಿ ವೆಚ್ಚದಲ್ಲಿ ಬೀದರ್–ಕಲಬುರ್ಗಿ ರೈಲ್ವೆ ಮಾರ್ಗ ಅಭಿವೃದ್ಧಿಪಡಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರ 2007ರ ನಂತರ ₹ 691 ಕೋಟಿ ಬಿಡುಗಡೆ ಮಾಡಿದೆ. ಈ ಪೈಕಿ ಶೇ 70ರಷ್ಟು ಅನುದಾನ 2014ರ ನಂತರ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. #JustFacts’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)