ಬುಧವಾರ, ಡಿಸೆಂಬರ್ 11, 2019
15 °C

ಬಿ.ಜಿ. ಬಣಕಾರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿ.ಜಿ. ಬಣಕಾರ ನಿಧನ

ಹಿರೇಕೆರೂರು (ಹಾವೇರಿ ಜಿಲ್ಲೆ): ವಿಧಾನಸಭೆ ಮಾಜಿ ಸ್ಪೀಕರ್‌ ಬಸವಣ್ಣೆಪ್ಪ ಗಡ್ಲಪ್ಪಗೌಡ ಬಣಕಾರ (91) ಬುಧವಾರ ರಾತ್ರಿ ಇಲ್ಲಿ ನಿಧನರಾದರು.

ಅವರಿಗೆ ಪತ್ನಿ, ಶಾಸಕ ಯು.ಬಿ. ಬಣಕಾರ ಸೇರಿ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ವಯೋಸಹಜ ಕಾಯಿಲೆಯಿಂದ ಮೃತ ಪಟ್ಟಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದ ಬಣಕಾರ, 1976ರಲ್ಲಿ ದೇವರಾಜ ಅರಸು ಸಂಪುಟದಲ್ಲಿ ಪಶುಸಂಗೋಪನಾ ಖಾತೆ ಸಚಿವರಾಗಿದ್ದರು. 1985ರಿಂದ 1989ರವರೆಗೆ ವಿಧಾನಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಗುರುವಾರ ಮಧ್ಯಾಹ್ನ 3ಕ್ಕೆ ಹಿರೇಕೆರೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)