ಬುಧವಾರ, ಡಿಸೆಂಬರ್ 11, 2019
15 °C

ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ

ಪುತ್ತೂರು: ಹಿರಿಯ ಕಾಂಗ್ರೆಸ್ ನಾಯಕ, ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಸಂಕಪ್ಪ ರೈ(85) ವಯೋಸಹಜ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಅವಿವಾಹಿತರಾಗಿದ್ದರು.

ಮಾಣಿ ಕ್ಷೇತ್ರದಿಂದ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು 5 ವರ್ಷ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿದ್ದರು. ಪುತ್ತೂರು ತಾಲ್ಲೂಕು ಬೋರ್ಡ್ ಅಧ್ಯಕ್ಷ, ಕೆಎಸ್‌ಆರ್‌ಟಿಸಿ ಮಹಾಮಂಡಲ ಯೂನಿಯನ್ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಮುಂತಾದ ಸ್ಥಾನಗಳನ್ನು ನಿರ್ವಹಿಸಿದ್ದರು.

ಪ್ರತಿಕ್ರಿಯಿಸಿ (+)