ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಶ್ರವಣ ದೋಷವುಳ್ಳವರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಏಳು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಸಚಿವೆ ಉಮಾಶ್ರೀ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇವೆ. ಯಾರೂ ಸಮಸ್ಯೆ ಆಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಅಂಗವಿಕಲರ ಉದ್ಯೋಗ ಮೇಳದಲ್ಲಿ ಹೊರ ರಾಜ್ಯದವರನ್ನು ಹಾಗೂ ಅರೆ ಅಂಗವಿಕಲರನ್ನು ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಅದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳನ್ನು ನಮಗೆ ಮೀಸಲಿಡಬೇಕು’ ಎಂದು ಕರ್ನಾಟಕ ರಾಜ್ಯ ಶ್ರವಣದೋಷವುಳ್ಳವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಗಣೇಶ್‌ರಾವ್ ಒತ್ತಾಯಿಸಿದರು.

ಸಂಘದ ಗೌರವಾಧ್ಯಕ್ಷ ಕೆ.ಎಂ.ಶಂಕರ್, ‘ಶ್ರವಣ ದೋಷದ ಪ್ರಮಾಣ ಆಧಾರದ ಮೇಲೆ ಮಕ್ಕಳನ್ನು ವರ್ಗೀಕರಿಸದೆ ಎಲ್ಲರಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಅದಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಸರ್ಕಾರಿ ಶಾಲೆಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.