ಬುಧವಾರ, ಡಿಸೆಂಬರ್ 11, 2019
15 °C

‘ಸರ್ಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸರ್ಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ’

ಬೆಂಗಳೂರು: ಬಡರೋಗಿಗಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಜಾರಿಗೆ ತಂದಿರುವ ಹಲವಾರು ಸವಲತ್ತುಗಳನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಚಂದ್ರಶೇಖರ್ ತಿಳಿಸಿದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಕೆ.ಆರ್‌. ಪುರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಬಿಪಿಎಲ್ ಕುಟುಂಬಗಳಿಗೆ ಉತ್ತಮ ದರ್ಜೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಕೊಡಿಸಲಾಗುವುದು. ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಮಾಹಿತಿ ನೀಡಿದರು.

ಅರೋಗ್ಯ ಶಿಬಿರದಲ್ಲಿ ನುರಿತ ವೈದ್ಯರ ತಂಡ ಸಾರ್ವಜನಿಕರಿಗೆ ತಪಾಸಣೆ ನಡೆಸಿತು.

ಪ್ರತಿಕ್ರಿಯಿಸಿ (+)