‘ಹೊಂದಾಣಿಕೆ ಆರೋಪ ಸತ್ಯಕ್ಕೆ ದೂರ’

7

‘ಹೊಂದಾಣಿಕೆ ಆರೋಪ ಸತ್ಯಕ್ಕೆ ದೂರ’

Published:
Updated:

ಮಸ್ಕಿ: ‘ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಖಚಿತವಾದ ನಂತರ ಕೆಲವರು ನನ್ನ ವಿರುದ್ಧ ವದಂತಿ ಹಬ್ಬಿಸುತ್ತಿದ್ದಾರೆ’ ಎಂದು ಬಿಜೆಪಿ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ ಹೇಳಿದರು.

ಬುಧವಾರ ಪಟ್ಟಣದ ಬಿಜೆಪಿ ಕಚೇರಿ ಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,‘ ಪಕ್ಷದ ವರಿಷ್ಠರು ಈಗಾಗಲೇ ನನಗೆ ಟಿಕೆಟ್ ನೀಡುವುದಾಗಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಆದರೆ, ಕೆಲವರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ನನ್ನ ಬಗ್ಗೆ ಅಪಚಾರ ಮಾಡುತ್ತಿದ್ದಾರೆ’ ಎಂದರು.

‘ನಾನು ಎಂದಿಗೂ ಹೊಂದಾಣಿಕೆ ರಾಜಕೀಯ ಮಾಡಿಲ್ಲ. ಇಲ್ಲಿನ ಪುರಸಭೆ, ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವಂತೆ ಮಾಡಿದ್ದಾನೆ. ಕ್ಷೇತ್ರದ ಸಮೀಕ್ಷೆ ನಂತರ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಕಾರ್ಯಕರ್ತರು ಇಂತಹ ಸುದ್ದಿಗಳಿಗೆ ಗಮನ ಕೊಡಬಾರದು’ ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry