ಗುರುವಾರ , ಜೂನ್ 4, 2020
27 °C

ಸಾರಾ ತೆಂಡೂಲ್ಕರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ, ಟೆಕಿ ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಾರಾ ತೆಂಡೂಲ್ಕರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ, ಟೆಕಿ ಬಂಧನ

ಮುಂಬೈ: ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ತೆಂಡೂಲ್ಕರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದ ಟೆಕಿಯನ್ನು ಮುಂಬೈ ಪೊಲೀಸರು ಅಂಧೇರಿಯಲ್ಲಿ ಬಂಧಿಸಿದ್ದಾರೆ.

ನಿತೀನ್ ಸಿಸೋದೆ(37) ಬಂಧಿತ ಟೆಕಿ. ಈತ ಸಾರಾ ಹೆಸರಿನಲ್ಲಿ ತೆರೆದಿದ್ದ ನಕಲಿ ಖಾತೆ ಮೂಲಕ ಕಾಂಗ್ರೆಸ್ ಮುಖಂಡ ಶರದ್ ಪವಾರ್ ಅವರ ವಿರುದ್ಧ ಅವಹೇಳನಕಾರಿ ಕಮೆಂಟ್‌ಗಳನ್ನು ಟ್ವೀಟ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸಚಿನ್ ತೆಂಡೂಲ್ಕರ್ ಅವರ ಆಪ್ತಸಹಾಯಕ ದೂರು ದಾಖಲಿಸಿದ್ದು, ತೆಂಡೂಲ್ಕರ್ ಅವರಿಗೆ ಆಘಾತವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ

ಬಂಧಿತ ಟೆಕಿಯ ಬಳಿಯಿದ್ದ ಲ್ಯಾಪ್‌ಟಾಪ್, ಎರಡು ಮೊಬೈಲ್, ರೂಟರ್, ಕಂಪ್ಯೂಟರ್ ಸಾಮಗ್ರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈತನನ್ನು ಶುಕ್ರವಾರ ಕೋರ್ಟ್‌ಗೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಸಾರಾ ಅವರು ಪ್ರಸ್ತುತ ಲಂಡನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.