ಬುಧವಾರ, ಏಪ್ರಿಲ್ 1, 2020
19 °C

ಶ್ರೀನಗರ ಆಸ್ಪತ್ರೆ ಮೇಲೆ ಉಗ್ರರ ದಾಳಿ ಪ್ರಕರಣ: ಉಗ್ರ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶ್ರೀನಗರ ಆಸ್ಪತ್ರೆ ಮೇಲೆ ಉಗ್ರರ ದಾಳಿ ಪ್ರಕರಣ: ಉಗ್ರ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶ್ರೀನಗರ: ಇಲ್ಲಿನ ಆಸ್ಪತ್ರೆಯಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಉಗ್ರ ನವೀದ್ ಜಾಟ್ ಬೈಕಿನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧದ ವಿಡಿಯೊ ಪೊಲೀಸರಿಗೆ ಲಭ್ಯವಾಗಿದೆ.

ಅಲ್ಲದೇ ಈ ದಾಳಿ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಐದನೇ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಲಷ್ಕರ್–ಎ–ತಯೆಬಾ ಈ ದಾಳಿಯ ಹೊಣೆ ಹೊತ್ತಿದೆ. ಲಭ್ಯವಾದ ದೃಶ್ಯಾವಳಿಯನ್ನು ಆಧರಿಸಿ ಜಮ್ಮು ಕಾಶ್ಮೀರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶ್ರೀನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆ ಮೇಲೆ ಫೆ.6ರಂದು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಚಿಕಿತ್ಸೆಗೆಂದು ಪೊಲೀಸರ ಜತೆ ಬಂದಿದ್ದ ಅಬು ಹಂಜುಲ್ಲಾ ಅಲಿಯಾಸ್ ನವೀದ್ ಜಾಟ್ ಪೊಲೀಸರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ದಾಳಿ ನಡೆಸಿ ಪರಾರಿಯಾಗಿದ್ದನು ಈ ವೇಳೆ ಪೊಲೀಸ್‌ ಕಾನ್‌ಸ್ಟೇಬಲ್ ಇಬ್ಬರು ಮೃತಪಟ್ಟಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)