ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಮನವಿ

Last Updated 8 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಧನ ಯೋಜನೆಯಡಿ ಟ್ಯಾಕ್ಸಿ ಖರೀದಿಸಲು ಅಲ್ಪಸಂಖ್ಯಾತರ ಸಮದಾಯದ ಫಲಾನುಭವಿಗಳ ಸಂಖ್ಯೆಯನ್ನು 2,000ಕ್ಕೆ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್ ತಿಳಿಸಿದರು.

ಫಲಾನುಭವಿಗಳಿಗಾಗಿ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಸಾಲಮೇಳದಲ್ಲಿ ಮಾತನಾಡಿದರು.

₹ 7 ಲಕ್ಷದ ಒಳಗಿನ ಟ್ಯಾಕ್ಸಿ ಅಥವಾ ಸರಕು ಸಾಗಣೆ ವಾಹನ ಖರೀದಿಗೆ ನಿಗಮದಿಂದ ₹ 3 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಕಳೆದ ವರ್ಷವೂ 2,000 ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲು ಕೋರಲಾಗಿತ್ತು. ಆದರೆ, ಸರ್ಕಾರ 500 ಫಲಾನುಭವಿಗಳಿಗೆ ಅನುದಾನ ನೀಡಿತ್ತು. ಈ ವರ್ಷದ ಬಜೆಟ್‌ನಲ್ಲಿ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಲು ಕೋರಲಾಗಿದೆ ಎಂದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಯ 215 ಫಲಾನುಭವಿಗಳನ್ನು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ. ಫಲಾನುಭವಿಗಳು ಬ್ಯಾಂಕ್‌ಗಳಿಗೆ ಅಲೆದಾಡುವುದನ್ನು ತಪ್ಪಿಸಲು ಈ ಮೇಳ ಆಯೋಜಿಸಲಾಗಿದೆ. ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆ ನೀಡಿದರೆ ಸಾಲ ಮಂಜೂರು ಮಾಡಲು ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT