ರೈಲು ಮಾರ್ಗ ನಿರ್ಮಿಸಿ

7

ರೈಲು ಮಾರ್ಗ ನಿರ್ಮಿಸಿ

Published:
Updated:

‘ತುಮಕೂರು– ದಾವಣಗೆರೆ ರೈಲು ಮಾರ್ಗವನ್ನು ನಿರ್ಮಿಸುತ್ತೇವೆ’ ಎಂದು ಸರ್ಕಾರ ಅನೇಕ ವರ್ಷಗಳಿಂದ ಭರವಸೆ ನೀಡುತ್ತಿದೆ. ಆದರೆ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಆಗುತ್ತಿಲ್ಲ.

ಈ ರೈಲು ಮಾರ್ಗದ ನಿರ್ಮಾಣದಿಂದ ಉತ್ತರ ಕರ್ನಾಟಕಕ್ಕೆ ಹೋಗಲು ತಗಲುವ ಸಮಯದಲ್ಲಿ ಸುಮಾರು ಮೂರು ಗಂಟೆಗಳಷ್ಟು ಕಡಿಮೆಯಾಗುತ್ತದೆ. ಬರಪೀಡಿತ ಜಿಲ್ಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗವಿಲ್ಲ. ಈ ಕೊರತೆಯನ್ನು ನೀಗಿಸುವ ಇಚ್ಛೆ ಸ್ಥಳೀಯ ಯಾವ ರಾಜಕಾರಣಿಯಲ್ಲೂ ಇದ್ದಂತಿಲ್ಲ. ಸರ್ಕಾರ ಈ ಬಗ್ಗೆ ಗಮನಹರಿಸಿ ಆದಷ್ಟು ಬೇಗ ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ರೈಲು ಮಾರ್ಗವನ್ನು ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry